ಕರ್ನಾಟಕ ರಾಜ್ಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಒಳ್ಳೆ ಬೆಳವಣಿಗೆ pic.twitter.com/HPhXlfmfyv
— ಸಾಮಾನ್ಯ ಕನ್ನಡಿಗ (@sakannadiga) August 15, 2019
73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ “ರಾಜ್ಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ ಎಂಬ ದೂರುಗಳು ತುಂಬಾ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ಯೋಗಳಲ್ಲಿ ಕನ್ನಡಿಗರಿಗೇ ಹೆಚ್ಚಿನ ಸ್ಥಾನ ನೀಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ. ಇದಕ್ಕೆ ನಾವು ಬದ್ದ ಎಂದು ಹೇಳಿದರು.
ಜೊತೆಗೆ ” ಬೇರೆ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ನೆಲೆಸಿರುವ ಜನರು ಇಲ್ಲಿನ ಭಾಷೆ, ಸಂಸ್ಕೃತಿಗೆ ಹೊಂದಿಕೊಂಡು ಕನ್ನಡವನ್ನು ಗೌರವಿಸಬೇಕಿದೆ ಎಂದು ಯಡಿಯೂರಪ್ಪ ಕರೆ ನೀಡಿದರು.
ಅಂದಹಾಗೆ ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ಸಿಗಬೇಕು ಎಂದು ಆಗ್ರಹಿಸಿ ಟ್ವೀಟರ್ನಲ್ಲಿ #KarnatakaJobsForKannadigas ಎಂಬ ಹ್ಯಾಶ್ ಟ್ಯಾಗ್ ಅಭಿಯಾನ ಆರಂಭವಾಗಿತ್ತು. ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿನ ಉದ್ಯೋಗಕ್ಕಾಗಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ರಾಜ್ಯದಲ್ಲಿನ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಕಚೇರಿಗಳಲ್ಲಿ; ರಾಜ್ಯ ಸರ್ಕಾರಿ ಸಾಮ್ಯದ ಎಲ್ಲ ಉದ್ದಿಮೆಗಳಲ್ಲಿ; ಖಾಸಗಿ ಕ್ಷೇತ್ರಗಳಲ್ಲಿಯೂ ಉದ್ಯೋಗಳಿಗೆ ಕನ್ನಡಿಗರನ್ನೇ ನೇಮಿಸಬೇಕೆಂದು ಆಗ್ರಹಿಸಲಾಗುತ್ತಿತ್ತು.. ಈಗ ಈ ಕೂಗಿಗೆ ಸಿಎಂ ಸ್ಪಂದಿಸಿದ್ದು ಕನ್ನಡಿಗರ ಹೋರಾಟಕ್ಕೆ ಪ್ರಾರ್ಥಮಿಕ ಜಯ ಸಿಕ್ಕಂತಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
