fbpx
ಸಮಾಚಾರ

SSLC ಪಾಸ್ ಆದವರಿಗೆ ಸುವರ್ಣಾವಕಾಶ: ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಬಗ್ಗೆ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಗಸ್ಟ್ 5, 2019 ರಿಂದ ಸೆಪ್ಟೆಂಬರ್ 4ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಿದ್ಯಾರ್ಹತೆ: ಹತ್ತನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ ಎಷ್ಟು: ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗೆ 12,000 ರಿಂದ 14, 500ರೂ. ಹಾಗೂ ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದೆಗಳಿಗೆ 10,000 ರಿಂದ 12,000ರೂ.ಗಳವರೆಗೆ ವೇತನ ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು. ಮೀಸಲಾತಿ ನಿಯಮದಂತೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ಎಷ್ಟು?
ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿ/ ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ವರ್ಗದವರಿಗೆ 100 ರೂ. ಶುಲ್ಕವಿದೆ. ಮಹಿಳೆ, ಅಂಗವಿಕಲ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ:
ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಬ್ಬರೂ/ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಪಡೆದಿದ್ದಲ್ಲಿ ವಯೋಮಿತಿಯನ್ನು ಮಾನದಂಡವನ್ನಾಗಿ ಪರಿಗಣಿಸಿ ಹಿರಿತನದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ. ಹೆಚ್ಚು ಓದಿದ್ದರೂ ಎಸ್‌ಎಸ್‌ಎಲ್‌ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ.

 

ಹುದ್ದಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

ಹುದ್ದೆಯ ನೋಟಿಫಿಕೇಶನ್ ಓದಲು ಇಲ್ಲಿ ಕ್ಲಿಕ್ ಮಾಡಿ:

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top