fbpx
ಸಮಾಚಾರ

ಪ್ರವಾಹದ ನಡುವೆ ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿದ ಬಾಲಕನಿಗೆ ಸಾಹಸ ಸೇವಾ ಪ್ರಶಸ್ತಿ

ಕೃಷ್ಣಾ ನದಿ ಪ್ರವಾಹದ ವೇಳೆ ಅಂಬುಲೆನ್ಸ್‌ಗೆ ದಾರಿ ತೋರಿಸಿ ಸಾಹಸ ಮೆರೆದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಗುರುವಾರ ನಡೆದ ಧ್ವಜಾರೋಹಣದ ವೇಳೆ ಬಾಲಕ ವೆಂಕಟೇಶ್ ನಿಗೆ ಜಿಲ್ಲಾಧಿಕಾರಿ ಶರತ್.ಬಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದ್ದಾರೆ.

 

 

ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ನೆನ್ನೆ ನಡೆದ ಸ್ವಾತಂತ್ರೋತ್ಸವದ ಧ್ವಜಾರೋಹಣದ ವೇಳೆ ಜಿಲ್ಲಾಡಳಿತ ಬಾಲಕನಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದೆ.

 

 

ಕೃಷ್ಣಾ ನದಿಯಿಂದ ಉಂಟಾದ ಪ್ರವಾಹಕ್ಕೆ ಹಿರೇರಾಯಕುಂಪಿ- ಗೂಗಲ್ ಸೇತುವೆ ಮುಳುಗಡೆ ಆಗಿತ್ತು. ಈ ವೇಳೆ ಮುಳುಗಡೆಯಾದ ಸೇತುವೆಯಲ್ಲಿ ಮೃತದೇಹ ಹೊತ್ತು ಬರುತ್ತಿದ್ದ ಅಂಬುಲೆನ್ಸ್‌ ಚಾಲಕನಿಗೆ ರಸ್ತೆ ಎಲ್ಲಿದೆ ಎಂಬುದು ಗೊತ್ತಾಗುತ್ತಿರಲಿಲ್ಲ.

 

ಆಗ ಬಾಲಕ ವೆಂಕಟೇಶ್ ನೀರಿನಲ್ಲಿ ನಡೆದು ದಾರಿ ತೋರಿಸುವ ಮೂಲಕ ಸಹಾಯ ಮಾಡಿದ್ದನು. ಚಿಕ್ಕವಯಸ್ಸಿನ ವೆಂಕಟೇಶ್ ಸಾಹಸಕ್ಕೆ ಜಿಲ್ಲಾಡಳಿತ ಮೆಚ್ಚುಗೆ ವ್ಯಕ್ತಪಡಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top