fbpx
ಸಮಾಚಾರ

ಪರಭಾಷಾ ಸ್ಟಾರ್ ಗಳೇ ಈಗ ಎಲ್ಲಿದ್ದೀರಾ? ಉತ್ತರ ಕರ್ನಾಟಕ ಪ್ರವಾಹದ ಕುರಿತು ಯುವರಾಜ್ ಕುಮಾರ್ ಕಿಡಿ.

ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಅವರು ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದಂತೆ ತಮ್ಮ ಫೇಸ್‍ಬುಕ್‍ನಲ್ಲಿ ಒಂದು ಸುದೀರ್ಘವಾದ ಪೋಸ್ಟ್ ಮಾಡಿದ್ದಾರೆ. ಇದೀಗ ಆ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಭಾರಿ ಅವಾಂತರ ಸೃಷ್ಟಿ ಮಾಡಿರುವ ಭೀಕರ ಪ್ರವಾಹದಿಂದಾಗಿ ರಾಜ್ಯದ ಲಕ್ಷಾಂತರ ಮಂದಿಯ ಬದುಕು ಬೀದಿಗೆ ಬಿದ್ದಿದ್ದು, ಪ್ರವಾಹ ಸಂತ್ರಸ್ಥರಿಗೆ ನೆರವಿನ ಹಸ್ತ ಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಮೂಲೆ ಮೂಲೆಯಿಂದಲೇ ಲಕ್ಷಾಂತರ ಮಂದಿ ತಮ್ಮ ಕೈಲಾದ ಮಟ್ಟಿಗೆ ನೆರವು ನೀಡುತ್ತಿದ್ದಾರೆ. ಆದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಸಿಟ್ಟಿಗೆದ್ದಿದ್ದಾರೆ.

ಹೌದು.. ಈ ಹಿಂದೆ ತಮಿಳುನಾಡು ಮತ್ತು ಕೇರಳದಲ್ಲಿ ಪ್ರವಾಹ ಉಂಟಾದಾಗ ಕರ್ನಾಟಕದಿಂದ ಸಾಕಷ್ಟು ಮಂದಿ ನೆರವಿಗೆ ಧಾವಿಸಿದ್ದರು. ಆದರೆ ಕರ್ನಾಟಕದಲ್ಲೇ ಭೀಕರ ಪ್ರವಾಹ ಉಂಟಾಗಿದ್ದು, ಪರಭಾಷಾ ನಟರು ಈ ಕುರಿತಂತೆ ಸೊಲ್ಲೆತ್ತಿಲ್ಲ ಎಂದು ಯುವರಾಜ್ ಕುಮಾರ್ ಪರೋಕ್ಷವಾಗಿ ಕಿಡಿಕಾರಿದ್ದಾರೆ.

 

 

ಯುವರಾಜ್ ಅವರ ಪೋಸ್ಟ್ ಈ ರೀತಿ ಇದೆ:
ಒಂದು ಆಲೋಚನೆ –

ನಮ್ಮ ಕರ್ನಾಟಕದ ಎಷ್ಟೋ ಜಿಲ್ಲೆಗಳ್ಲಲಿ ಜಲಪ್ರಳಯದ ಪರಿಣಾಮ ಲಕ್ಷಾಂತರ ಜನರು ನಷ್ಟದಲ್ಲಿದಾರೆ .. ಅವರಲ್ಲಿ ನೂರಾರು ಜನರು ನಿರಾಶ್ರಿತರಾಗಿದ್ದಾರೆ, ಆಹಾರವಿಲ್ಲ, ಮೂಲಭೂತ ಸೌಕರ್ಯಗಳಿಲ್ಲ.. ನಾವು ಕನ್ನಡಿಗರು , ಇಲ್ಲಿನ ಸಂಘ ಸಂಸ್ಥೆಗಳು , ಸೇನೆ ದಳಗಳು , ಕರ್ನಾಟಕ ಸರ್ಕಾರ ಎಲ್ಲರೂ ಒಂದಾಗಿ ಕೈಲಾದಷ್ಟು ಸಹಾಯ ಮಾಡಲು ಪ್ರಯತ್ನ ಪಡುತ್ತಿದ್ದೇವೆ ..
ಆದರೆ, ಎಲ್ಲಾ ಹೊರಗಿನ ಸೆಲೆಬ್ರಿಟಿಗಳು / ಸ್ಟಾರ್‌ಗಳು / ರಾಜಕಾರಣಿಗಳು ತಮ್ಮ ಚಲನಚಿತ್ರಗಳನ್ನು ಪ್ರಚಾರ ಮಾಡಲು, ತಮ್ಮ ಬ್ರಾಂಡ್ ಅನ್ನು ಉತ್ತೇಜಿಸಲು, ನಮ್ಮ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಲು , ಮತ ಕೇಳಲು ಕರ್ನಾಟಕಕ್ಕೆ ಬರುವವರು ಎಲ್ಲಿದ್ದಾರೆ? ಇಲ್ಲಿ ಬರೋದು , ಸಹಾಯ ಮಾಡೋದ್ ಇರಲಿ, ನನಗೆ ಯಾರ ಟ್ವೀಟ್ , ಪೋಸ್ಟ್ ನೋಡಿದ ನೆನಪು ಆಗುತ್ತಿಲ್ಲ !
ಅಂದ ಹಾಗೆ , ಸಹಾಯ ಮಾಡಲು ಮುಂದೆ ಬಂದಿರುವ ಎಲ್ಲರಿಗೂ ನಮ್ಮ ಕೋಟಿ ವಂದನೆಗಳು 🙏🏼🙏🏼
ನಾನು ಏನಾದರೂ ತಪ್ಪು ಹೇಳುತ್ತಿದ್ದೇನೆಯೇ? ತಪ್ಪಿದರೆ ಕ್ಷಮೆ ಇರಲಿ 🙏🏼

ಯಾರೇ ಬರಲಿ ಬಿಡಲಿ ನಮ್ಮವರ ಜೊತೆ ,ಎಲ್ಲರ ಜೊತೆ ನಾವು ಇರೋಣ .. 🙏🏼

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top