fbpx
ಸಮಾಚಾರ

ಪ್ರವಾಹ ನಿಧಿಗೆ ಧರ್ಮಸ್ಥಳದಿಂದ 25 ಕೋಟಿ, ಸುಧಾಮೂರ್ತಿಯವರಿಂದ 10 ಕೋಟಿ ಪರಿಹಾರ ಈ ಇಬ್ಬರಿಗೆ ಕೈಮುಗಿದ ಕನ್ನಡಿಗರು

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಸ್ಪಂದಿಸಿರುವ ಅನೇಕರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸಹಾಯ ಹಸ್ತ ಚಾಚಿದ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗ್ಗಡೆ

ಇದೀಗ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗಡೆ ನೆರೆ ಸಂತ್ರಸ್ಥರಿಗೆ ನೆರೆವಿನ ಹಸ್ತ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋ.ರೂ ಹೆಗ್ಗಡೆಯವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ವೀರೇಂದ್ರ ಹೆಗ್ಗಡೆ, “ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂಪಾಯಿ ಮೀಸಲಾಗಿರಿಸಿದ್ದು, ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ ಮಾಡಿ 2 ಲಕ್ಷ ಸದಸ್ಯರಿಗೆ ತರಬೇತಿ ನೀಡಲಾಗುವುದು” ಎಂದು ಹೇಳಿದರು. ಈ ಸಂದರ್ಭದಲ್ಲಿ ಹೇಮಾವತಿ ವಿ.ಹೆಗ್ಗಡೆ, ಶಾಸಕ ಹರೀಶ್ ಪೂಂಜ, ಡಾ.ಎಲ್.ಎಚ್. ಮಂಜುನಾಥ್ ಉಪಸ್ಥಿತರಿದರು.

 

 

ಉತ್ತರ ಕರ್ನಾಟಕಕ್ಕೆ ಸಹಾಯ ಹಸ್ತ ಚಾಚಿದ ಸುಧಾಮೂರ್ತಿ

ಇನ್‍ಫೋಸಿಸ್‍ನ ಅಂಗಸಂಸ್ಥೆಯಾಗಿರುವ ಸ್ವಯಂ ಸೇವಾ ಸಂಸ್ಥೆಯಾದ ಇನ್‍ಫೋಸಿಸ್ ಫೌಂಡೇಶನ್ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ 10 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದೆ, ಇನ್‍ಫೋಸಿಸ್ ಫೌಂಡೇಶನ್ ನ ಸ್ವಯಂ ಸೇವಕರು ಈಗಾಗಲೇ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ, ದಿನನಿತ್ಯದ ಅಗತ್ಯ ವಸ್ತುಗಳಾದ ಬೆಡ್ ಶೀಟ್ ,ಟವೆಲ್ , ದಿನಸಿ ಸಾಮಾನುಗಳು , ರೆಡಿ ಟು ಈಟ್ ಆಹಾರ , ಸೋಪ್ , ಒಳ ಉಡುಪು ಇತ್ಯಾದಿ ಸಾಮಗ್ರಿಗಳನ್ನು ಈಗಾಗಲೇ ಕಳುಹಿಸಿಕೊಟ್ಟಿದ್ದಾರೆ.

ರಾಜ್ಯಾದ್ಯಂತ ಮಳೆರಾಯನ ಅಬ್ಬರಕ್ಕೆ ಹೆಚ್ಚಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿ ಜಲಾವೃತಗೊಂಡಿದೆ. ಜನರು ಮನೆ, ಮಠ ಕಳೆದುಕೊಂಡು ಕಂಗಲಾಗಿ ಹೋಗಿದ್ದಾರೆ. ಸದ್ಯ ಅವರಿಗೆ ನೆರವಿನ ಸಹಾಯ ಹಸ್ತ ಬೇಕಾಗಿದ್ದು, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಸಹಾಯ ಒದಗಿಸುತ್ತಿದೆ.

ಜೊತೆಗೆ ಸ್ಯಾಂಡಲ್​ವುಡ್​ ನಟರು, ಕಲಾವಿದರು ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ನೆರವಿಗೆ ಧಾವಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top