fbpx
ಸಮಾಚಾರ

ಪ್ರೇಯಸಿಯೊಂದಿಗೆ ಸಾಂಸಾರಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕ್ರಿಕೆಟಿಗ ಕರುಣ್ ನಾಯರ್.

ಕರ್ನಾಟಕದ ಸ್ಟಾರ್‌ ಬ್ಯಾಟ್ಸ್‌ಮನ್‌ ಹಾಗೂ ಭಾರತ ಟೆಸ್ಟ್‌ ತಂಡವನ್ನು ಪ್ರತಿನಿಧಿಸಿರುವ ತಾರೆ ಕರುಣ್‌ ನಾಯರ್ ತಮ್ಮ ದೀರ್ಘಕಾಲದ ಪ್ರೇಯಸಿ ಸಾನ್ಯಾ ಟಕಾರಿವಾಲ ಅವರೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 27 ವರ್ಷದ ಬಲಗೈ ಬ್ಯಾಟ್ಸ್‌ಮನ್‌ ಕರುಣ್‌ ನಾಯರ್‌ ತಮ್ಮ ಪ್ರೇಯಸಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ವಿಚಾರವನ್ನು ತಮ್ಮ ಅಧಿಕೃತ ಟ್ವಿಟರ್‌ ಮತ್ತು ಇನ್‌ಸ್ಟಾಗ್ರಾಮ್‌ ಖಾತೆ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

 

 

ಕೇರಳದ ಕೊಟ್ಟಾಯಂ ಜಿಲ್ಲೆಯ ಶೆಂಗನಾಚೆರ್ರಿಯ ಕಂಟರ್ ಬ್ಯಾಕ್ ವಾಟರ್​ನಲ್ಲಿ ನಡೆದ್ದಿದ್ದು ಕೇವಲ ಸಂಬಂಧಿಕರು ಹಾಗೂ ಆಪ್ತ ಸ್ನೇಹಿತರಿಗಷ್ಟೇ ಸಮಾರಂಭಕ್ಕೆ ಆಹ್ವಾನ ನೀಡಲಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ರಾಜಸ್ಥಾನದಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಕರುಣ್ ನಾಯರ್ ರಾಜಸ್ಥಾನದ ಜೋಧ್​ಪುರದಲ್ಲಿ ಜನಿಸಿದ ಹಿನ್ನೆಲೆಯಲ್ಲಿ ಅಲ್ಲೇ ವಿವಾಹ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಟೆಸ್ಟ್ ಕ್ರಿಕೆಟ್’ನಲ್ಲಿ ವಿರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಭಾರತದ ಎರಡನೇ ಕ್ರಿಕೆಟಿಗ ಎನ್ನುವ ದಾಖಲೆ ಬರೆದಿರುವ ಕರುಣ್ ನಾಯರ್, ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ 303 ರನ್ ಬಾರಿಸಿ ದಾಖಲೆ ಬರೆದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top