fbpx
ಸಮಾಚಾರ

ಪ್ರವಾಹ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ರೂ ಚೆಕ್ ಹಸ್ತಾಂತರಿಸಿದ ಉಪೇಂದ್ರ.

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕನ್ನಡ ಚಿತ್ರರಂಗ ಕೂಡ ಸ್ಪಂದಿಸಿದ್ದು ಅನೇಕ ಕಲಾವಿದರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಉತ್ತರಕ ಕರ್ನಾಟಕ ಸಂತ್ರಸ್ತರಿಗಾಗಿ ಸಹಾಯ ಹಸ್ತ ಚಾಚಿದ್ದಾರೆ.

 

 

ಗುರುವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ನಟ ಉಪೇಂದ್ರ ಅವರು, ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಚೆಕ್‌ ಅನ್ನು ಮುಖ್ಯಮಂತ್ರಿ ಸ್ವೀಕರಿಸಿದರು. ಇದಕ್ಕೂ ಹಿಂದೆ ಆಗಸ್ಟ್‌ 8ರಂದು ಟ್ವೀಟ್‌ ಮಾಡಿದ್ದ ನಟ ಉಪೇಂದ್ರ, ತಾವು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಅಲ್ಲದೆ, ಸಾರ್ವಜನಿಕರೂ ಇಚ್ಚಾ‌ನುಸಾರ ನೆರವು ನೀಡಬೇಕಾಗಿ ಕೋರಿದ್ದರು.

ಪರಿಹಾರ ನಿಧಿಗೆ ಹಣದ ನೆರವು ನೀಡುವುದಾಗಿ ಹೇಳಿಕೊಂಡಿದ್ದ ಉಪೇಂದ್ರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ”ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ/-ರೂ ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ. #SAVENORTHKARNATAKA #KarnatakaFloods #saveuttarakannada ” ಎಂದು ಉಪೇಂದ್ರ ಬರೆದುಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top