fbpx
ಸಮಾಚಾರ

ಸಾವಿನಲ್ಲೂ ಆದರ್ಶ: ‘ದೇಶ ಮೊದಲು, ಪ್ರವಾಸ ಮೊಟಕು ಬೇಡ’ ಪ್ರಧಾನಿಗೆ ಜೇಟ್ಲಿ ಕುಟುಂಬಸ್ಥರ ಮನವಿ.

ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (66) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಜೇಟ್ಲಿ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರುಣ್ ಜೇಟ್ಲಿ ಅವರು ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

 


ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಜಿ 7 ಶೃಂಗಸಭೆ ನಿಮಿತ್ತ ಪ್ರಧಾನಿ ಮೋದಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದು, ಪ್ರಸ್ತುತ ಪ್ರಧಾನಿ ಮೋದಿ ಯುಎಇ ಪ್ರವಾಸದಲ್ಲಿದ್ದಾರೆ. ನಿಗದಿತ ಕಾರ್ಯಕ್ರಮದಂತೆ ಅಲ್ಲಿಂದ ಮೋದಿ ಬಹ್ರೇನ್ ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ಅರುಣ್ ಜೇಟ್ಲಿ ಅವರ ನಿಧನದ ಹಿನ್ನಲೆಯಲ್ಲಿ ಅವರು ಪ್ರವಾಸ ಮೊಟಕುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರಿಗೆ ತಮ್ಮ ವಿದೇಶ ಪ್ರವಾಸವನ್ನು ರದ್ದು ಮಾಡದಂತೆ ಒತ್ತಾಯ ಮಾಡಿದ್ದಾರಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top