fbpx
ಸಮಾಚಾರ

ಇಂದು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿಯಲಿದ್ದಾರೆ ಟೀಂ ಇಂಡಿಯಾ ಆಟಗಾರರು

ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಬಿಸಿಸಿಐ ಶನಿವಾರ ಸಂತಾಪ ಸೂಚಿಸಿದೆ . ರಾಜಕಾರಣಿಯಾಗಿದ್ದರೂ ಅರುಣ್ ಜೇಟ್ಲಿ ಅವರು ಕ್ರಿಕೆಟ್ ಕ್ಷೇತ್ರಕ್ಕೆ ಬೆಂಬಲ ನೀಡುತ್ತಿದ್ದರು.. ಅತ್ಯಂತ ಸಮರ್ಥ ಮತ್ತು ಗೌರವಾನ್ವಿತ ಕ್ರಿಕೆಟ್ ಆಡಳಿತಗಾರರಲ್ಲಿ ಅರುಣ್ ಜೇಟ್ಲಿ ಕೂಡ ಒಬ್ಬರಾಗಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಶನಿವಾರ ಕಪ್ಪು ಪಟ್ಟಿ ಧರಿಸಿ ಆಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

 

 

ಅರುಣ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘದ (ಡಿಡಿಸಿಎ) ಅಧ್ಯಕ್ಷರಾಗಿದ್ದರು. ಈ ವೇಳೆ ರಾಜ್ಯ ಕ್ರಿಕೆಟ್‍ನ ಆಡಳಿತದಲ್ಲಿ ಬದಲಾವಣೆ ತಂದಿದ್ದರು. ಅವರ ಕುಟುಂಬದ ನೋವು ಮತ್ತು ದುಃಖವನ್ನು ಹಂಚಿಕೊಳ್ಳುತ್ತದೆ. ಅರುಣ್ ಜೇಟ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತದೆ ಎಂದು ಬಿಸಿಸಿಐ ಶ್ಲಾಘಿಸಿದೆ.

 

 

ಡಿಡಿಸಿಎ ಅಧ್ಯಕ್ಷರಾಗಿ ಸುದೀರ್ಘ ಅವಧಿಯಲ್ಲಿ ಅವರು ಮೂಲಸೌಕರ್ಯದಲ್ಲಿ ಭಾರೀ ಬದಲಾವಣೆಯನ್ನು ತಂದರು. ಕ್ರಿಕೆಟಿಗರ ಆಪ್ತ ಸ್ನೇಹಿತರಾದ ಅವರು ಯಾವಾಗಲೂ ಅವರೊಂದಿಗೆ ನಿಲ್ಲುತ್ತಿದ್ದರು, ಆಟಗಾರರನ್ನು ಪ್ರೋತ್ಸಾಹಿಸಿದರು. ಉತ್ತಮ ಆಟಗಾರರಿಗೆ ಆಯ್ಕೆ ಮಾಡಿ ಅವರನ್ನು ಬೆಂಬಲಿಸುತ್ತಿದ್ದರು ಎಂದು ಬಿಸಿಸಿಐ ನೆನೆದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top