fbpx
ಸಮಾಚಾರ

ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ- ಕಾರಣವೇನು ಗೊತ್ತಾ?

ಕನ್ನಡದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಚಿತ್ರೀಕರಣಕ್ಕೆ ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರಕ್ಕೆ ಭಾರಿ ಸಂಕಷ್ಟ ಎದುರಾಗಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ದುಬಾರಿಯ ಸೆಟ್ ಹಾಕಲಾಗಿದೆ. ಆದರೆ ಶ್ರೀನಿವಾಸ್ ಎಂಬವರು ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ಮಧ್ಯೆ ನ್ಯಾಯಾಲಯದ ತಡೆಯಾಜ್ಞೆ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು, ಆದೇಶ ನೋಡಿ ನ್ಯಾಯಾಲಯಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಈಗಾಗಲೇ ಶೇಕಡಾ 60 ರಷ್ಟು ಚಿತ್ರೀಕರಣ ಮುಗಿದಿದ್ದು, ಈ ಹಿಂದೆ ಈ ರೀತಿಯ ತೊಂದರೆ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.

ಕೆಜಿಎಫ್ -2ರಲ್ಲಿ ಅಧೀರನ ಪಾತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಸೇರಿದಂತೆ ಮತ್ತಿತರ ನಟರು ಅಭಿನಯಿಸುತ್ತಿದ್ದು, ಗಾಂಧಿನಗರದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗ ನ್ಯಾಯಾಲಯ ನೀಡಿರುವ ಆದೇಶದಿಂದ ಚಿತ್ರೀಕರಣ ವಿಳಂಬವಾಗುತ್ತದೆಯಾ? ಎಂಬ ಪ್ರಶ್ನೆ ಮೂಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top