fbpx
ಸಮಾಚಾರ

“ಕನ್ನಡ ಬರಲ್ಲ ಎಂದು ನಾನು ಹೇಳಿಲ್ಲ, ಆದರೆ….!” ಚೇಂಬರ್ ಅಧ್ಯಕ್ಷರಿಗೆ ರಶ್ಮಿಕಾ ಹೇಳಿದ್ದೇನಂತೆ ಗೊತ್ತಾ?

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಧ್ವನಿಯೆತ್ತಿದ ವಿಚಾರಗಳೇ ಹೆಚ್ಚು ರಾರಾಜಿಸುತ್ತಿದೆ. ಕೆಲ ದಿನಗಳ ಹಿಂದೆ ನನಗೆ ಕನ್ನಡ ಸರಿಯಾಗಿ ಮಾತನಾಡಲು ಬರಲ್ಲ ಎಂದಿದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ಇದರ ಬಗ್ಗೆ ಕ್ರಮ ಕೈಗೊಳ್ಳದ ಫಿಲ್ಮ್ ಚೇಂಬರ್ ಅನ್ನು ಮತ್ತೆ ಹೋರಾಟಗಾರರು ಪ್ರಶ್ನಿಸಿದ್ದಾರೆ.

ಈ ವೇಳೆ ಈ ವಿಚಾರದ ಬಗ್ಗೆ ಮಾತನಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಜೈರಾಜ್ ಕನ್ನಡಪರ ಹೋರಾಟಗಾರರಿಗೆ ರಶ್ಮಿಕಾ ಜೊತೆ ನಾವು ಮಾತನಾಡಿದ್ದೇವೆ. ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅವರು ನಮ್ಮೊಂದಿಗೆ ಮಾತನಾಡಿದ್ದಾರೆ. “ನನಗೆ ಕನ್ನಡ ಮಾತಾಡಲು ಬರಲ್ಲ ಎಂದು ಹೇಳಿಲ್ಲ. ಬದಲಾಗಿ ಎಲ್ಲಾ ಭಾಷೆಯನ್ನು ಮಾತನಾಡುವಾಗ ಬಾಯಿ ತೊದಲುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದೇನೆ” ಎಂದು ಅವರು ಹೇಳಿದರು ಎಂದು ಜೈರಾಜ್ ತಿಳಿಸಿದ್ದಾರೆ.

ಏನಿದು ವಿವಾದ:
ತಮಿಳು ಯುಟ್ಯೂಬ್ ಚಾನೆಲ್ ನವರು ಕನ್ನಡ ನಿಮಗೆ ಸುಲಭ ಅಲ್ಲವೇ ಎಂದು ಪ್ರಶ್ನೆಯನ್ನು ಕೇಳಿದ್ದರು. ಆಗ ರಶ್ಮಿಕಾ ನನಗೆ ಕನ್ನಡ ಕಷ್ಟ ಎಂದು ಉತ್ತರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ವಿಚಾರವಾಗಿ ಒಕ್ಕೊರಲಿನಿಂದ ರಶ್ಮಿಕಾ ಅವರನ್ನು ಕನ್ನಡ ಸಿನಿಮಾಗಳಿಂದ ಬ್ಯಾನ್ ಮಾಡಬೇಕೆಂದು ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top