fbpx
ಸಮಾಚಾರ

“ನೀವಿನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ ‘ಅಪಘಾತ’ ವಾಗುತ್ತೆ” ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

ಸಿದ್ದರಾಮಯ್ಯ ತಮ್ಮ ಕಾಲು ಭದ್ರವಾಗಿ ಇಟ್ಟುಕೊಳ್ಳಲಿ ಎಂಬ ಸಚಿವ ಸಿ.ಟಿ. ರವಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಟಾಂಗ್ ನೀಡಿದ್ದು, ಸಿ.ಟಿ ರವಿ ಅವರೇ ನೀವಿನ್ನೂ ಯುವಕರು ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ ಎಂದು ವ್ಯಂಗ್ಯ ಮಾಡಿದ್ದಾರೆ.

 

 

ಟ್ವಿಟ್ ನಲ್ಲೇನಿದೆ..?
ಸನ್ಮಾನ್ಯ ಸಿಟಿ ರವಿಯವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಬರೆದು ಸಿಟಿ ರವಿ ಹಾಗೂ ಐಎನ್‍ಸಿ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.

ಸಿಟಿ ರವಿ ಹೇಳಿದ್ದೇನು?
ಸರ್ಕಾರ ಟೇಕಾಫ್ ಆಗಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ್ದ ಸಚಿವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಲ್ಲಿ ಪ್ರಶ್ನಾತೀತ ನಾಯಕ ಅಂದುಕೊಂಡಿದ್ದೆವು. ಅವರಲ್ಲಿ ಇನ್ನೂ ಪ್ರತಿಪಕ್ಷ ನಾಯಕ ಯಾರೆಂದು ನಿರ್ಧಾರ ಆಗಿಲ್ಲ. ಕಾಂಗ್ರೆಸ್ಸಿನಲ್ಲೇ ಸಿದ್ದರಾಮಯ್ಯ ಅವರ ಕಾಲೆಳೆಯೋರು ಜಾಸ್ತಿಯಾಗಿದ್ದಾರೆ. ಸಿದ್ದರಾಮಯ್ಯ ಮೊದಲು ತಮ್ಮ ಕಾಲು ಯಾರೂ ಎಳೆಯದಂತೆ ನೋಡಿಕೊಳ್ಳಲಿ. ನಮ್ಮ ಸರ್ಕಾರ ಟೇಕಾಫ್ ಆಗಿದೆ. ನಮ್ಮ ಸರ್ಕಾರ ಕಾರ್ಯಾರಂಭ ಮಾಡಿ ತಿಂಗಳಾಗಿದೆ ಎಂದು ಟಾಂಗ್ ನೀಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top