fbpx
ಸಮಾಚಾರ

“ಡಿಕೆಶಿ ಬಂಧನ ನನಗೆ ಸಂತೋಷ ಕೊಟ್ಟಿಲ್ಲ” ಡಿಕೆಶಿ ಬಂಧನದ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನದಿಂದ ತಮ್ಮಗೆ ಸಂತೋಷವಾಗಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ನೆಪವೊಡ್ಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, “ನಾನು ಜೀವನದಲ್ಲಿ ಯಾರ ಮೇಲೂ ದ್ವೇಷ ರಾಜಕಾರಣ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು‌ ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೆ ಆದ ಕ್ರಮ ತೆಗೆದುಕೊಳ್ಳುತ್ತದೆ. ಅವರ ಬಂಧನ ನಮಗೆ ಸಂತೋಷ ನೀಡಿಲ್ಲ. ಅವರು ಆದಷ್ಟು ಬೇಗ ಹೊರಗೆ ಬರಲಿ ಎಂದು‌ ನಾನು ದೇವರಲ್ಲಿ ಪ್ರಾರ್ಥನೆ ಮಾಡ್ತೀನಿ. ಅವರು ಹೊರಗಡೆ ಬಂದ್ರೆ ನಾನೇ ಬೇರೆಯವರಿಗಿಂತ ಹೆಚ್ಚು ಸಂತೋಷ ಪಡುತ್ತೇನೆ” ಎಂದು ಡಾಲರ್ಸ್ ಕಾಲೋನಿಯ ‌ನಿವಾಸದಲ್ಲಿ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top