fbpx
ಸಮಾಚಾರ

ಕಿಂಗ್ ಕೊಹ್ಲಿ ಅಧಿಪತ್ಯಕ್ಕೆ ಕೊನೆ: ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಾರಿದ ಕೊಹ್ಲಿ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ತಾಜಾ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ಅಗ್ರಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಂ.1 ಪಟ್ಟಕ್ಕೇರಿದ್ದಾರೆ.

 

 

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇದು ಕೊಹ್ಲಿ ಅವರ ನಾಲ್ಕನೇ ಗೋಲ್ಡನ್ ಡಕೌಟ್ ಆಗಿದೆ. ಮೊದಲ ಟೆಸ್ಟ್ ಇನ್ನಿಂಗ್ಸ್ ನಲ್ಲಿ 10 ಬೌಂಡರಿ ಸೇರಿದಂತೆ 76 ರನ್ ಕಲೆ ಹಾಕಿದ್ದರು. ಹೀಗಾಗಿ ಕೊಹ್ಲಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇನ್ನೊಂದೆಡೆ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ 338 ರನ್ ಕಲೆ ಹಾಕಿದ್ದರು. ಬಳಿಕ ಗಾಯದಿಂದಾಗಿ ಮೂರನೇ ಟೆಸ್ಟ್ ಮಿಸ್ ಮಾಡಿಕೊಂಡಿದ್ದರು. ಸದ್ಯ ಕೊಹ್ಲಿ ಎರಡನೇ ಸ್ಥಾನಕ್ಕೆ ತಳ್ಳಿರುವ ಸ್ಮಿತ್, ಒಂದು ಅಂಕದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇದೀಗ ಆ್ಯಶಸ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿದರೆ ಅಂತರವನ್ನು ಮತ್ತಷ್ಟು ವೃದ್ಧಿಸಿಕೊಳ್ಳುವ ಅವಕಾಶವನ್ನು ಪಡೆದಿದ್ದಾರೆ.

2015ರಿಂದ ಸುಮಾರು ಮೂರು ವರ್ಷಗಳ ಕಾಲ ಬಹುತೇಕ ಅವಧಿಯಲ್ಲಿ ಸ್ಮಿತ್ ಅಗ್ರಶ್ರೇಯಾಂಕದಲ್ಲಿದ್ದರು. 2018ರಲ್ಲಿ ಅವರು ಚೆಂಡು ವಿರೂಪ ಪ್ರಕರಣದಲ್ಲಿ ಅಮಾನತು ಶಿಕ್ಷೆ ಅನುಭವಿಸಿದ್ದರು. ಆಗ ಒಂದು ವರ್ಷ ಅವರು ಕ್ರಿಕೆಟ್‌ ಆಡಿರಲಿಲ್ಲ. ಈಚೆಗೆ ಅವರು ಶಿಕ್ಷೆ ಮುಗಿಸಿ ತಂಡಕ್ಕೆ ಮರಳಿದ್ದರು. ಆ್ಯಷಸ್ ಸರಣಿಯ ಒಂದೇ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಅವರು ಮತ್ತೆ ಅವರು ಮೊದಲ ಸ್ಥಾನದತ್ತ ದಾಪುಗಾಲಿಟ್ಟಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top