fbpx
ಸಮಾಚಾರ

“ನನ್ನನ್ನು ಕ್ಷಮಿಸಿ; ಮನೆ ಮನೆಗೆ ಮದ್ಯ ಪೂರೈಸುವ ಯೋಜನೆ ಕೈಬಿಟ್ಟಿದ್ದೇವೆ” ಅಬಕಾರಿ ಸಚಿವರ ಯುಟರ್ನ್.

ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಯೋಜನೆಯ ಕುರಿತು ಅಬಕಾರಿ ಸಚಿವ ನಾಗೇಶ್ ಯು-ಟರ್ನ್ ಹೊಡೆದಿದ್ದಾರೆ. ಇಂದು (ಸೆಪ್ಟೆಂಬರ್ 5) ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ನಾಗೇಶ್, “ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ” ಎಂದಿದ್ದಾರೆ.

ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನೆಮನೆಗೆ ಮದ್ಯಪಾನ ಪೂರೈಕೆ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಸರ್ಕಾರ ಯಾವುದೇ ಆದೇಶ ಹೊರಡಿಸಿರಲಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿನ್ನೆ ಕೊಟ್ಟಂತಹ ಹೇಳಿಕೆಯನ್ನು ವಾಪಸ್ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಸಭೆಯ ವೇಳೆ ಮಾತನಾಡುವಾಗ ತಪ್ಪಾಗಿದೆ. ಆದರೆ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ. ಮದ್ಯ ಪೂರೈಕೆ ವಿಚಾರದಿಂದ ಮಹಿಳೆಯರಿಗೆ ಬೇಸರವಾಗಿದ್ದು, ಅವರ ಬಳಿ ಕ್ಷಮೆಯಾಚಿಸುವುದಾಗಿ ತಿಳಿಸಿದರು.

ಕುಡಿದು ವಾಹನ ಚಲಾಯಿಸಿದರೆ 10 ಸಾವಿರ ರೂ. ದಂಡ ತೆತ್ತಬೇಕು. ಅಲ್ಲದೆ ಕುಡಿದು ವಾಹನ ಚಲಾಯಿಸುವಾಗ ಅಪಘಾತ ಸಂಭವಿಸುವ ಸಾಧ್ಯತೆಯೂ ಇರುತ್ತದೆ. ಇದನ್ನು ತಪ್ಪಿಸಲು ಮನೆ ಬಾಗಿಲಿಗೆ ಮದ್ಯ ಯೋಜನೆ ಸಹಕಾರಿಯಾಗಲಿದೆ ಎಂಬ ಆಲೋಚನೆ ಸಚಿವ ಎಚ್​ನಾಗೇಶ್ ಅವರದ್ದಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top