fbpx
ಸಮಾಚಾರ

‘ಭ್ರಷ್ಟಾಚಾರ ಮಾಡಿ ತನಿಖೆ ಎದುರಿಸಲಾಗದವರು ಸೇಡಿನ ರಾಜಕಾರಣ ಎನ್ನುತ್ತಾರೆ” ಸಿದ್ದು ಹಳೆ ಟ್ವೀಟ್ ವೈರಲ್.

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡೀ ಅಧಿಕಾರಿಗಳು ಅರೆಸ್ಟ್ ಮಾಡುತ್ತಿದ್ದಂತೆ ಅನೇಕ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣದ ಆರೋಪ ಮಾಡುತ್ತಿದ್ದಾರೆ.

 

 

‘ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿ ಡಿ.ಕೆ.ಶಿವಕುಮಾರ್ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿ ಡಿ.ಕೆ.ಶಿವಕುಮಾರ್ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ’ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೇರ ಆರೋಪ’’ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೇರ ಆರೋಪ ಮಾಡುತ್ತಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ಮತ್ತು ಸೇಡಿನ ರಾಜಕಾರಣದ ಬಗ್ಗೆ ಎರಡು ವರ್ಷಗಳ ಹಿಂದೆ ಮಾಡಿರುವ ಟ್ವೀಟ್ ಈಗ ವೈರಲ್ ಆಗಿದೆ. ವೈರಲ್ ಆಗಿರುವ ಆ ಹಳೆಯ ಟ್ವೀಟ್ ನಲ್ಲಿ ‘ಸೇಡಿನ ರಾಜಕಾರಣ ಮಾಡುತ್ತಿದ್ದೇನೆ ಎನ್ನುವ ವಿಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಭ್ರಷ್ಟಾಚಾರಗಳನ್ನು ಮಾಡಿ ಜೈಲಿಗೆ ಹೋದವರು ತನಿಖೆಗಳನ್ನು ಎದುರಿಸಲಾಗದೆ ಹೇಳುವ ಮಾತಿದು’ ಎಂದು ಇದೆ.

ಅಕ್ರಮ ಡಿನೋಟಿಫೈ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಅವರು ಎಸಿಬಿ ಸಂಸ್ಥೆ ಮತ್ತು ತಮ್ಮ ಆಪ್ತ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆ ವೇಳೆ ಸಿದ್ದರಾಮಯ್ಯ ಈ ಟ್ವೀಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top