fbpx
ಸಮಾಚಾರ

ಡಿಕೆ ಶಿವಕುಮಾರ್ ಬೆನ್ನಲ್ಲೇ ಕುಮಾರಸ್ವಾಮಿಗೂ ಎದುರಾಯ್ತು ಸಂಕಷ್ಟ: ಸಮನ್ಸ್ ಜಾರಿ.

ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಇಡಿ ಬಲೆಗೆ ಸಿಲುಕಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ಸಂಕಷ್ಟ ಎದುರಾಗಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ. ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ 19 ಆರೋಪಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಮನ್ಸ್‌ ಜಾರಿ ಮಾಡಿದೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.

ಇದನ್ನು ಪ್ರಶ್ನಿಸಿ ಮಹದೇವಸ್ವಾಮಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಿಂದ ಸುಮ್ಮನಿದ್ದು ಆರು ತಿಂಗಳ ಹಿಂದೆ ಬಿ.ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ನ್ಯಾಯಾಧೀಶ ರಾಮಚಂದ್ರ ಡಿ. ಉಡಿಗಾರ್ ಅವರು ಆದೇಶ ನೀಡಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಎಚ್​ಡಿಕೆಗೆ ಸಮನ್ಸ್ ನೀಡಲಾಗಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top