fbpx
ಸಮಾಚಾರ

ದುಬಾರಿ ದಂಡದಿಂದ ಪಾರಾಗಲು ಬೈಕ್ ಸವಾರರು ಮಾಡಿದ ಮಾಸ್ಟರ್ ಪ್ಲಾನ್- ನೋಡಿ ಸುಸ್ತಾದ ಪೊಲೀಸರು!

ದೇಶದಲ್ಲಿ ಜಾರಿಗೆ ಬಂದಿರುವ ನೂತನ ಸಂಚಾರ ನಿಯಮಗಳಿಂದಾಗಿ ದಂಡ ಹಾಕಿಸಿಕೊಳ್ಳುವವರ ಸಂಖ್ಯೆ ಪ್ರತನಿತ್ಯ ಏರತೊಡಗಿದೆ. ನೂತನ ಸಂಚಾರಿ ನಿಯಮಗಳ ಅನ್ವಯ ಹೆಲ್ಮೆಟ್ ಇಲ್ಲದೆ ಗಾಡಿ ಚಲಾಯಿಸುವುದು, ಅಗತ್ಯ ದಾಖಲೆಗಳಲ್ಲಿದೇ ಇರುವುದು ಕೂಡ ಅಪರಾಧ. ಇಂತಹ ಪ್ರಕರಣಗಳಲ್ಲಿಗೆ ಟ್ರಾಫಿಕ್ ಪೊಲೀಸರು ದುಬಾರಿ ದಂಡ ವಿಧಿಸುತ್ತಿದ್ದಾರೆ. ಈ ಹಿಂದೆ 500 ರೂ ದಂಡ ವಿಧಿಸುತ್ತಿದ್ದ ಪ್ರಕರಣಗಳಿಗೆ ಇದೀಗ ಕನಿಷ್ಛ 2 ಸಾವಿರ ರೂ ದಂಡ ಹೇರಲಾಗುತ್ತಿದೆ. ನಿನ್ನೆ ದೇಶಾದ್ಯಂತ ಭಾರಿ ಮೊತ್ತದ ದಂಡ ವಸೂಲಾಗಿದೆ.

 

 

ಕೇಂದ್ರದ ಈ ನಿಯಮ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದ್ದು ಮಾತ್ರವಲ್ಲದೆ, ವಾಹನ ಸವಾರರು ದಂಡದಿಂದ ತಪ್ಪಿಸಿಕೊಳ್ಳಲು ನಾನಾ ಉಪಾಯಗಳನ್ನು ಮಾಡುತ್ತಾ ಟ್ರಾಫಿಕ್ ಪೊಲೀಸರನ್ನೇ ದಂಗಾಗುವಂತೆ ಮಾಡುತ್ತಿದ್ದಾರೆ.

ಈ ಕುರಿತ ಹಾಸ್ಯಾತ್ಮಕ ವಿಡಿಯೋವೊಂದನ್ನು ಗುರುಗ್ರಾಮದ ಐಪಿಎಸ್ ಅಧಿಕಾರಿ ಪಂಕಜ್ ನೈನ್ ಅವರು ಶೇರ್ ಮಾಡಿಕೊಂಡಿದ್ದು, ವಿಡಿಯೋದಲ್ಲಿ ರಸ್ತೆಯಲ್ಲಿ ಸಂಚಾರಿ ಪೊಲೀಸರು ಬೈಕ್ ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರೆ, ಅತ್ತ ಹಿಂದೆ ಪೊಲೀಸರ ಇರುವಿಕೆ ಕಂಡ ಬೈಕ್ ಸವಾರರು ಬೈಕ್ ನಿಂದ ಇಳಿದು ಬೈಕ್ ಅನ್ನು ಪೊಲೀಸರ ಮುಂದೆಯೇ ತಳ್ಳಿ ಕೊಂಡು ಹೋಗುತ್ತಿದ್ದಾರೆ.

ಸಂಚಾರಿ ನಿಯಮದ ಪ್ರಕಾರ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುವುದು ಅಪರಾಧ. ಆದರೆ ಹೆಲ್ಮೆಟ್ ಇಲ್ಲದೆ ಬೈಕ್ ತಳ್ಳುವುದು ಅಪರಾಧವಲ್ಲ. ಇದನ್ನೇ ಉಪಾಯವಾಗಿ ಬಳಸಿಕೊಂಡ ಎಲ್ಲಾ ಬೈಕ್ ಸವಾರರು ಪೊಲೀಸರ ಎದುರೇ ತಳ್ಳಿಕೊಂಡು ಹೋಗುತ್ತಿದ್ದಾರೆ . ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ಪಂಕಜ್ ನೈನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು ಬೈಕ್ ಸವಾರರ ಈ ಉಪಾಯ ಪೊಲೀಸರನ್ನು ದಂಗು ಮಾಡಿದೆ.

ಒಬ್ಬರೋ ಇಬ್ಬರೋ ಬೈಕ್ ತಳ್ಳಿಕೊಂಡು ಹೋದರೆ ಪೆಟ್ರೋಲ್ ಖಾಲಿಯೋ ಅಥವಾ ಬೈಕ್ ನ ತಾಂತ್ರಿಕ ಸಮಸ್ಯೆಯೋ ಎಂದುಕೊಳ್ಳಬಹುದು. ಆದರೆ ಆ ರಸ್ತೆಯಲ್ಲಿ ಬರುತ್ತಿದ್ದ ಎಲ್ಲ ಬೈಕ್ ಸವಾರರೂ ಬೈಕ್ ಗಳನ್ನು ತಳ್ಳಿಕೊಂಡು ಬರುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top