fbpx
ಸಮಾಚಾರ

“ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾಯದ ಸ್ಥಿತಿ ಬಂದಿದೆ” ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ.

ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಆಗಸ್ಟ್ 3ರಿಂದ ರಜೆಯಲ್ಲಿ ತೆರಳಿರುವ ಜಿಲ್ಲಾಧಿಕಾರಿ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಭಿನ್ನ ಕಾರ್ಯವೈಖರಿ ಹಾಗೂ ಜನಪರ ನಿಲುವುಗಳ ಮೂಲಕ ಗುರುತಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಸಿಕಾಂತ್ ರಾಜೀನಾಮೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

 

 

“ನಮ್ಮ ವೈವಿಧ್ಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದ ರೀತಿಯಲ್ಲಿ ರಾಜಿ ಮಾಡಿಕೊಳ್ಳುವಾಗ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ನನಗೆ ಅನೈತಿಕವೆಂದು ಎನಿಸಿದ ಕಾರಣ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ನಾನು ಐಎಎಸ್ ನಿಂದ ಹೊರಬಂದು ನನ್ನ ಕೆಲಸ ಮುಂದುವರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡು ಮೂಲದವರಾದ ಸಸಿಕಾಂತ್ ಅವರು, “ಮುಂಬರುವ ದಿನಗಳಲ್ಲಿ ನಮ್ಮ ರಾಷ್ಟ್ರದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಎದುರಿಸಲಿದೆ. ಹೀಗಾಗಿ ನಾನು ನನ್ನ ಐಎಎಸ್‌ ಸೇವೆಯಿಂದ ಹೊರಬರಲು ನಿರ್ಧರಿಸಿದ್ದು, ಎಲ್ಲರಿಗೂ ಒಳಿತು ಮಾಡಲು ಬಯಸಿದ್ದೇನೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

2009ರ ಬ್ಯಾಚಿನ ಈ ಅಧಿಕಾರಿ 2017 ಅಕ್ಟೋಬರ್ ತಿಂಗಳಿಂದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸಸಿಕಾಂತ್ ಅವರು ಕೆಲಸ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top