fbpx
ಸಮಾಚಾರ

ಫೋಟೋಶೂಟ್‌ಗೆ ಸೋಫಾ ಬೇಡ, ಕುರ್ಚಿ ಕೊಡಿ ಸಾಕು ಎಂದ ಪ್ರಧಾನಿ ಮೋದಿ: ವಿಡಿಯೋ ವೈರಲ್‌

ರಷ್ಯಾದ ವ್ಲಾಡಿವೋಸ್ಟಾಕ್ನಲ್ಲಿ ನಡೆದ ಫೋಟೋ ಸೆಷನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶಾಲವಾದ ಸೋಫಾವನ್ನು ನಿರಾಕರಿಸಿದರು. ಸೋಫಾ ಬದಲಿಗೆ ಇತರರೊಂದಿಗೆ ಕುರ್ಚಿಯ ಮೇಲೆ ಕುಳಿತುಕೊಂಡರು. ಪ್ರಧಾನಿ ಮೋದಿಯವರ ಸರಳತೆಗೆ ಕನ್ನಡಿ ಹಿಡಿಯುವಂತಿರುವ ಈ ವಿಡಿಯೋವನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

ಫೋಟೋ ಸೆಷನ್ ನಲ್ಲಿ ಪ್ರಧಾನಿ ಮೋದಿಯವರು ದುಬಾರಿಯಾದ ಹಾಗೂ ವಿಶಾಲವಾದ ಸೋಫಾವನ್ನು ನಿರಾಕರಿಸಿ. ಕುರ್ಚಿಯಲ್ಲಿ ಕುಳಿತುಕೊಂಡಿದ್ದಾರೆ. ಇದನ್ನು ಕಂಡ ಇತರೆ ಅಧಿಕಾರಿಗಳು ತಾವೂ ಕೂಡ ಕುರ್ಚಿಯಲ್ಲಿ ಕುಳಿತುಕೊಂಡಿದ್ದಾರೆ. ಮೋದಿಯವರ ಈ ಸರಳತೆಯ ಮನಸ್ಥಿತಿಯನ್ನು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಖಾತೆ ಟ್ವಿಟರ್ ನಲ್ಲಿ ಹೆಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಈಗ ಭಾರಿ ಪ್ರಚಾರ ಪಡೆಯುತ್ತಿದ್ದು, ಪ್ರಧಾನಿ ಮೋದಿಯವರ ಸರಳತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ಐದನೇ ಪೂರ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಮತ್ತು 20 ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ವ್ಲಾಡಿವೋಸ್ಟಾಕ್‌ಗೆ ಎರಡು ದಿನಗಳ ಭೇಟಿಯಲ್ಲಿದ್ದರು. ಅವರು ಶುಕ್ರವಾರ ಮುಂಜಾನೆ ನವದೆಹಲಿಗೆ ಮರಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top