fbpx
ಸಮಾಚಾರ

“ಡಿಕೆ ಶಿವಕುಮಾರ್ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ” ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್.

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿರುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಡಿಕೆ ಶಿವಕುಮಾರ್ ಮೇಲೆ ಇಡಿ ಕೇಸ್ ದಾಖಲಾಗಲು ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ. ಕಾಂಗ್ರೆಸ್​ನಲ್ಲಿ ಡಿಕೆಶಿ ಬೆಳೆಯುತ್ತಾರೆಂದು ಅವರನ್ನು ಮಟ್ಟ ಹಾಕಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಲೇ ಇದ್ದರು. ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿಯಲ್ಲ; ಸಿದ್ದರಾಮಯ್ಯನವರು” ಎಂದು ನಳಿನ್ ಕುಮಾರ್ ಕಟೀಲು ಬಾಗಲಕೋಟೆಯಲ್ಲಿ ಹೇಳಿದ್ದಾರೆ.

“ಡಿಕೆ ಶಿವಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಅಥವಾ ಯಾವುದೇ ಲೋಕಾಯುಕ್ತ ಅಧಿಕಾರಿಗಳೂ ಒಳಗೆ ಹಾಕಿಲ್ಲ. 2017 ರಲ್ಲಿ ಐಟಿ ದಾಳಿಯಾದಾಗ ಕಾಂಗ್ರೆಸ್ ಸರ್ಕಾರವೇ ಇತ್ತು. ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಸಿದ್ದರಾಮಯ್ಯ ನಿಲ್ಲಿಸಬಹುದಿತ್ತಲ್ಲ, ಯಾಕೆ ನಿಲ್ಲಿಸಲಿಲ್ಲ ಎಂದು ಪ್ರಶ್ನಿಸಿದರು. ಹೀಗಾಗಿ ದ್ವೇಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸೇರಿಕೊಂಡಿದ್ದಾರೆ. ಆದ್ದರಿಂದ ಡಿಕೆಶಿ ಮೇಲೆ ಕೇಸ್ ಹಾಕುವುದಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಸಂಶಯ ನನಗಿದೆ. ಡಿಕೆಶಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

2017ರಲ್ಲಿ ಅವರ ಮನೆಯಲ್ಲಿ ಐಟಿ ದಾಳಿ ಮಾಡಿದೆ. ಐಟಿ ಸಿಸ್ಟಮ್, ಇಡಿಯವರು ದಾಖಲೆಗಳನ್ನು ನೋಡಿಕೊಂಡು ಕೇಸ್ ದಾಖಲು ಮಾಡುತ್ತಾರೆ. ಅದೇ ರೀತಿ ಕೇಸ್ ದಾಖಲು ಮಾಡಿ ಡಿಕೆಶಿಯನ್ನು ಅರೆಸ್ಟ್ ಮಾಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ರಾಜಕೀಯ ದ್ವೇಷ ಮಾಡುವುದೇ ಆಗಿದ್ದರೆ ಚುನಾವಣೆ ಮುಂಚೆಯೇ ಮಾಡಬಹುದಿತ್ತು. ಚುನಾವಣೆ ಮುಂಚೆಯೇ ಅವರನ್ನು ಒಳಗೆ ಹಾಕಬಹುದಿತ್ತು ಎಂದರು.

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಯಾವತ್ತೂ ದಾಖಲಾತಿಗಳನ್ನು ನೋಡಿಕೊಂಡೇ ಪ್ರಕರಣ ದಾಖಲು ಮಾಡುತ್ತೆ. ಅಕ್ರಮಗಳ ಕೇಸ್ ದಾಖಲು ಮಾಡಿದ ಬಳಿಕವೇ ಡಿಕೆಶಿ ಅರೆಸ್ಟ್ ಮಾಡಲಾಗಿದೆ ಎಂದು ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮರ್ಥಿಸಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top