fbpx
ಸಮಾಚಾರ

ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಹೊಸ ಸೀಸನ್: ಈ ಬಾರಿ ಬೇರೆ ಚಾನೆಲ್!

ಕನ್ನಡ ಕಿರುತೆರೆಯ ಅತಿದೊಡ್ಡ ಮತ್ತು ಜನಪ್ರಿಯ ರಿಯಾಲಿಟಿ ಷೋ ಎಂಬ ಹೆಸರು ಗಿಟ್ಟಿಸಿರುವ ಬಿಗ್’ಬಾಸ್ ಕಾರ್ಯಕ್ರಮದ ಆರನೇ ಸೀಸನ್ ಮುಗಿದು ಇನ್ನೂ ಏಳೆಂಟು ತಿಂಗಳುಗಳು ಮಾತ್ರವೇ ಸವೆದಿದೆ. ಹೀಗಿದ್ದರೂ ಅದಾಗಲೇ ಮತ್ತೊಂದು ಸೀಸನ್ನಿನ ಬಗ್ಗೆ ನಾನಾ ಗಾಸಿಪ್’ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.. ಒಂದಷ್ಟು ಮನರಂಜನೆಯ ಜೊತೆಗೆ ಸ್ಪರ್ಧಿಗಳ ನಡುವಿನ ರಂಪಾಟ, ಸಣ್ಣತನ, ಕಿರಿಕ್ಕುಗಳೇ ಜೀವಾಳವಾಗಿರೋ ಈ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಜನರಿಗೆ ತಕರಾರಿದೆ. ಇದು ನಮ್ಮ ಕನ್ನಡ ನೆಲಕ್ಕೆ ಒಗ್ಗದ ಕಾನ್ಸೆಪ್ಟ್ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿರುತ್ತದೆ. ಇಂಥ ನೂರೆಂಟು ತಾತ್ಸಾರದ ಮಾತುಗಳ ನಡುವೆಯೂ ಬರೋಬ್ಬರಿ ಆರು ಸೀಸನ್ನುಗಳನ್ನು ಮುಗಿಸಿರುವ ಬಿಗ್ ಬಾಸ್ ಇದೀಗ ಏಳನೇ ಬಾರಿಗೆ ಕನ್ನಡ ಪ್ರೇಕ್ಷಕರ ಬಳಿಗೆ ಲಗ್ಗೆಯಿಡುತ್ತಿದೆ..

ಈ ಭಾರಿ ಕಲರ್ಸ್ ಕನ್ನಡಲ್ಲಿ:
ಕಳೆದ ಬಾರಿ ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರವಾಗಿತ್ತು. ಅದಕ್ಕಿಂತ ಮೊದಲು ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿತ್ತು. ಈ ಬಾರಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಆ ಮೂಲಕ ಮತ್ತೆ ಆರಂಭದ ಎರಡು ಆವೃತ್ತಿಗಳಲ್ಲಿ ಪ್ರಸಾರವಾದ ಕಲರ್ಸ್ ವಾಹಿನಿಯಲ್ಲೇ ಮತ್ತೆ ಪ್ರಸಾರವಾಗುತ್ತಿದೆ.

ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಬಿಗ್ ಬಾಸ್ ಶೋನ ಏಳನೇ ಅವತರಣಿಕೆಗೆ ಈಗಾಗಲೇ ಸ್ಪರ್ಧಿಗಳನ್ನು ಆಯ್ಕೆಯ ಪ್ರಕ್ರಿಯೆ ನಡೆಯುತ್ತಿದ್ದು ಅದಕ್ಕೆ ಸಂಭಂದಪಟ್ಟ ಕೆಲಸಗಳನ್ನೂ ಈಗಾಗಲೇ ಶುರುವಿಟ್ಟುಕೊಂಡಿದ್ದರಂತೆ.. ಒಟ್ಟಿನಲ್ಲಿ ಎಲ್ಲ ಅಂದುಕೊಂಡಂತೆ ಆದರೆ ಅಕ್ಟೊಬರ್ ಅಂತ್ಯದ ವೇಳೆಗೆ ಹೊಸ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಕಾಲಿಡೋದಂತೂ ಕನ್ಫರ್ಮ್ ಅಂತೇ. ಈ ಮೂಲಕ ಎಲ್ಲೋ ಒಂದಿಷ್ಟು ಮಂದಿ ಪ್ರತಿಭಾವಂತರು, ರಿಟೇರ್‍ಮೆಂಟ್ ಸ್ಟೇಜಿನ ಕಲಾವಿದರು ಮತ್ತು ಕೆಲವೊಂದಷ್ಟು ತಿಕ್ಕಲುತಾಣಗಳು, ಅಸಹ್ಯಕಾರಿ ಸಣ್ಣತನಗಳನ್ನು ಮತ್ತೊಮ್ಮೆ ನೋಡೋ ಕಾಲ ಬರುತ್ತಿದೆ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top