fbpx
ಸಮಾಚಾರ

“ಸಸಿಕಾಂತ್ ಪಾಕಿಸ್ತಾನಕ್ಕೆ ಹೋಗಲಿ” ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಕಿಡಿ

ಪಾಕಿಸ್ತಾನಕ್ಕೆ ವಲಸೆ ಹೋಗುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರಿಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದರು. ಇದರಿಂದ ಕೋಪಗೊಂಡಿರುವ ಸಂಸದರು, ಟ್ವೀಟ್ ಮೂಲಕ ಸಸಿಕಾಂತ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

 

 

ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರೂ ನಿಯತ್ತು ತೋರಿಸಲಿ’ ಎಂದಿದ್ದಾರೆ.

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದಂತೆ ಅಭೂತಪೂರ್ವ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕರಾಗಿ ಮುಂದುವರಿಯುವುದು ನನಗೆ ಅನೈತಿಕ ಎಂದು ಭಾವಿಸಿದ್ದರಿಂದ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಸಸಿಕಾಂತ್ ಸೆಂಥಿಲ್ ಅವರು ತಮ್ಮ ಐಎಎಸ್ ಸೇವೆಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ ಬಳಿಕ ಹೇಳಿಕೆಯಲ್ಲಿ ತಿಳಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top