fbpx
ಸಮಾಚಾರ

‘ಡಿಕೆಶಿ ಪುತ್ರಿಗೂ’ ಎದುರಾಯ್ತು ಸಂಕಷ್ಟ: ಐಶ್ವರ್ಯಾಗೆ ED ಸಮನ್ಸ್

ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಂಧನದಲ್ಲಿರುವ ಶಾಸಕ ಡಿ ಕೆ ಶಿವಕುಮಾರ್‌ ಪುತ್ರಿಗೂ ಇದೀಗ ಸಂಕಷ್ಟ ಎದುರಾಗಿದ್ದು, ಇ.ಡಿ. ಅಧಿಕಾರಿಗಳು ಪುತ್ರಿ ಐಶ್ವರ್ಯಾಗೂ ಸಮನ್ಸ್‌ ಜಾರಿ ಮಾಡಿದ್ದಾರೆ.

ಸೆಪ್ಟೆಂಬರ್ 12 ರಂದು ಬೆಳಗ್ಗೆ 11 ಗಂಟೆಗೆ ಇಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಐಶ್ವರ್ಯ ಅವರಿಗೆ ಸೂಚನೆ ನೀಡಲಾಗಿದೆ. ಡಿಕೆ ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇದೇ 13 ರಂದು ಮುಕ್ತಾಯವಾಗುತ್ತಿರುವುದರಿಂದ 12 ರಂದೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿರುವುದು ವಿಶೇಷವಾಗಿದೆ.

ಐಶ್ವರ್ಯ ಅವರ ಹೆಸರಿನಲ್ಲಿ ಸೋಲ್ ಅಂಡ್ ಸೇಲ್ಸ್ ನಲ್ಲಿ 78 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಈ ಮೊತ್ತವನ್ನು ನನ್ನ ಹಿತೈಷಿಗಳು, ಕುಟುಂಬದವರು, ಸ್ನೇಹಿತರು ಕೊಟ್ಟ ಹಣ ಎಂದು ಡಿಕೆಶಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ನ್ಯಾಷನಲ್ ಗ್ಲೋಬಲ್ ಕಾಲೇಜಿನಲ್ಲಿ ಐಶ್ವರ್ಯಾ ಟ್ರಸ್ಟಿಯಾಗಿದ್ದಾರೆ.

ಸೋಲ್ ಅಂಡ್ ಸೇಲ್ಸ್ ಯೋಜನೆಯ ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಹೂಡಿಕೆ ಮಾಡಿರುವ ಹಣ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎನ್ನಲಾಗಿದೆ. ಅಲ್ಲದೇ ಬೇರೆ ಬೇರೆ ಮೂಲಗಳಿಂದ ಸಂಗ್ರಹ ಮಾಡಿರುವ ಅನುಮಾನ ಕೂಡ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ಹಾಗಾಗಿ ಐಶ್ವರ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top