fbpx
ಸಮಾಚಾರ

ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗರ ಪ್ರತಿಭಟನೆ: ಎಚ್‌ಡಿಕೆ ಗೈರಾಗಿದ್ದು ಈ ಕಾರಣಕ್ಕಂತೆ?

ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ಒಕ್ಕಲಿಗ ಒಕ್ಕೂಟ ಭಾರೀ ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ. ನನ್ನನ್ನು ಯಾರೂ ಪ್ರತಿಭಟನೆಗೆ ಆಹ್ವಾನಿಸಿಲ್ಲ. ಆದ್ದರಿಂದ ನಾನು ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, “ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮವರಿಗೆ ಪ್ರತಿಭಟನೆ ರ‍್ಯಾಲಿಗೆ ಬೆಂಬಲ ಕೊಡಲು ಹೇಳಿದ್ದೇನೆ. ನಮ್ಮ ಎಲ್ಲ ಕಾರ್ಯಕರ್ತರು ಭಾಗವಹಿಸಿದ್ದಾರೆ. ಇಲ್ಲಿಯ ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಅಲ್ಲದೆ ನನ್ನ ಗಮನಕ್ಕೆ ತರದೇ ತರಾತುರಿಯಲ್ಲಿ ಕಾರ್ಯಕ್ರಮ ಮಾಡಿಕೊಂಡಿದ್ದಾರೆ. ”

ಮೊದಲೇ ಹೇಳಿದ್ದರೆ ಅಥವಾ ಇನ್ವಿಟೇಷನ್ ನೀಡುತ್ತಿದ್ದರೆ ನಾನು ಭಾಗವಹಿಸುತ್ತಿದ್ದೆ. ಅದರಲ್ಲಿ ಏನು ಇದೆ. ಒಟ್ಟಿನಲ್ಲಿ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಮುಂದೆ ಕುಮಾರಸ್ವಾಮಿಯವರನ್ನು ಬಂಧಿಸುತ್ತಾರೆಎಂದು ಹೇಳಲಾಗುತ್ತಿದೆ. ಆದರೆ ನನ್ನನ್ನು ಯಾರೂ ಏನೂ ಮಾಡಲು ಆಗಲ್ಲ.ನಾನು ಯಾವ ತಪ್ಪನ್ನೂ ಮಾಡಿಲ್ಲ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top