fbpx
ಸಮಾಚಾರ

“ಹಿಂದಿಯೊಂದೇ ದೇಶದ ಭಾಷೆಯಾಗಬೇಕು”- ಇರಲಾರದೆ ಕನ್ನಡಿಗರ ಕೆಣಕಿದ ಅಮಿತ್‌ ಶಾ ಹೇಳಿಕೆ ವಿರುದ್ಧ ಆಕ್ರೋಶ!

“ಸುಮ್ಮನಿರಲಾರದೆ ಇರುವೆ ಬಿಟ್ಟುಕೊಂಡ” ಎಂಬ ಮಾತಿನಂತೆ, ‘ಹಿಂದಿ ದಿವಸ್’ ದಿನ, ‘ದೇಶ ಒಗ್ಗಟ್ಟಾಗಬೇಕಿದ್ದರೆ ಅದು ಹಿಂದಿ ಭಾಷೆಯಿಂದ ಮಾತ್ರ ಸಾಧ್ಯ’ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಾದೇಶಿಕ ಭಾಷಾ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 

 

ದೇಶದಲ್ಲಿ ಹೆಚ್ಚು ಬಳಕೆಯಾಗುವ ಹಿಂದಿ ಭಾಷೆಯು ಭಾರತವನ್ನು ಬೆಸೆಯುವ ಸಾಮರ್ಥ್ಯ ಹೊಂದಿದೆ. ಹಿಂದಿಯು ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಭಾಷೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ‘ ಭಾರತ ದೇಶದವು ಹಲವು ವಿಭಿನ್ನ ಭಾಷೆಗಳನ್ನು ಹೊಂದಿದೆ, ಪ್ರತಿ ಭಾಷೆ ತನ್ನದೇ ಆದ ಮಹತ್ವವನ್ನು ಹೊಂದಿದೆ,ಆದರೆ ಈ ಸಂದರ್ಭದಲ್ಲಿ ಭಾರತದ ಅಸ್ಮಿತೆಯನ್ನು ಜಾಗತಿಕವಾಗಿ ಗುರುತಿಸಲು ಒಂದು ಸಾಮಾನ್ಯ ಭಾಷೆಯನ್ನು ಹೊಂದುವುದು ಅಗತ್ಯವಾಗಿದೆ. ಇಂದು ಯಾವುದಾದರೂ ಒಂದು ಭಾಷೆ ದೇಶವನ್ನು ಒಗ್ಗೂಡಿಸುತ್ತಿದ್ದಲ್ಲಿ ಅದೂ ಹಿಂದಿ ಭಾಷೆ ಮಾತ್ರ, ಈ ಭಾಷೆ ಭಾರತದಲ್ಲಿ ಅತಿ ಹೆಚ್ಚು ಮಾತನಾಡುವ ಮತ್ತು ಅರ್ಥೈಸಿಕೊಳ್ಳುವ ಭಾಷೆಯಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಈಗ ಕೇಂದ್ರ ಸರ್ಕಾರದ ಈ ನಡೆಗೆ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಹಿಂದಿಯನ್ನು ನಮ್ಮ ಮೇಲೆ ಬಲವಂತವಾಗಿ ಹೇರುವ ಪ್ರಯತ್ನ ನಡೆಸಿದರೆ ಅತ್ಯುಗ್ರ ಹೋರಾಟ ಮಾಡಬೇಕಾಗಬಹುದು ಎಂದು ಕನ್ನಡ, ತಮಿಳು, ಮಲಯಾಳಂ ಭಾಷಾ ಪ್ರೇಮಿಗಳು ಸವಾಲು ಎಸೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top