fbpx
ಸಮಾಚಾರ

“ಕನ್ನಡದ ವಿಷಯದಲ್ಲಿ ರಾಜಿ ಇಲ್ಲ” – ಹಿಂದಿ ಹೇರಿಕೆ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಸಿಎಂ ಯಡಿಯೂರಪ್ಪ.

ದೇಶಕ್ಕೊಂದು ಅಧಿಕೃತ ಭಾಷೆ ಬೇಕು ಎನ್ನುವ ಮೂಲಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಭಿಪ್ರಾಯ, ಇದೀಗ ಭಾರೀ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಹಿಂದಿ ಭಾಷೆ ಉತ್ತೇಜನದ ವಿರುದ್ಧ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದವೇ ಕೆಂಡವಾಗಿದೆ.. ಇದೀಗ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು ಕೂಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ದೇಶದಲ್ಲಿ ಎಲ್ಲಾ ಅಧಿಕೃತ ಭಾಷೆಗಳು ಸಮಾನ. ಆದರೆ, ಕರ್ನಾಟಕದಲ್ಲಿ ಕನ್ನಡವೇ ಪ್ರಧಾನ ಭಾಷೆ. ಕನ್ನಡ ಭಾಷೆಯ ಪ್ರಾಮುಖ್ಯತೆಯಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಮತ್ತು ರಾಜ್ಯ ಸಂಸ್ಕೃತಿಯನ್ನು ಉತ್ತೇಜಿಸಲು ನಾವು ಕಟಿಬದ್ಧರಾಗಿದ್ದೇವೆ” ಎಂದು ಟ್ವೀಟ್​​ ಮಾಡಿದ್ದಾರೆ.

‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ‌ ಯಾವುದೇ ತಾರತಮ್ಯ ಸಲ್ಲದು‌. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇತ್ತೇಚೆಗೆ ಹಿಂದಿ ದಿವಸ್​​ ಆಚರಣೆ ಮಾಡುವ ಕೇಂದ್ರ ಸರ್ಕಾರವೂ ಹಿಂದಿಯೇತರರ ಮೇಲೆ ಹೇರಿಕೆಗೆ ಮುಂದಾಗಿತ್ತು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಸೇರಿದಂತೆ ರಾಜ್ಯ ಬಿಜೆಪಿ ನಾಯಕರ, “ಒಂದು ದೇಶ, ಒಂದು ಭಾಷೆ” ಎಂಬ ಧ್ವನಿ ಎತ್ತಿದರು. ಅಲ್ಲದೇ ಇಡೀ ಜಗತ್ತು ಭಾರತವನ್ನು ಗುರುತಿಸಲು ಏಕಮಾತ್ರ ಭಾಷೆಯ ಅಗತ್ಯವಿದೆ. ಸದ್ಯಕ್ಕೀಗ ಇಡೀ ದೇಶವನ್ನು ಒಂದು ಭಾಷೆಯ ಅಡಿಯಲ್ಲಿ ಏಕತೆಗೊಳಿಸುವ ಶಕ್ತಿ ಹಿಂದಿ ಭಾಷೆಗೆ ಮಾತ್ರ ಇದೆ ಎಂದು ಟ್ವೀಟ್​ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲ ಬಿಜೆಪಿ ನಾಯಕರೂ ತಮ್ಮ ಅಸಮಾಧಾನ ಹೊರಹಾಕಿದ್ದರು. ತಮಿಳುನಾಡು, ಆಂಧ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲೂ ಅಮಿತ್ ಶಾ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top