fbpx
ಸಮಾಚಾರ

“ದೇಶಭಕ್ತರು ಬಿಜೆಪಿಗೆ ವೋಟ್ ಹಾಕ್ತಾರೆ, ಪಾಕಿಸ್ತಾನವನ್ನು ಬೆಂಬಲಿಸುವವರು ಬಿಜೆಪಿಗೆ ವೋಟ್ ಹಾಕಲ್ಲ” ಸಚಿವ ಈಶ್ವರಪ್ಪ.

ದೇಶಭಕ್ತರು ಬಿಜೆಪಿಗೆ ವೋಟ್ ಹಾಕುತ್ತಾರೆ. ಪಾಕಿಸ್ತಾನದ ಪರ ಇರುವವರು ಬಿಜೆಪಿಗೆ ವೋಟ್ ಹಾಕಲ್ಲ. ನಾನು ಇದೂವರೆಗೂ ನನ್ನ ಕ್ಷೇತ್ರದಲ್ಲಿ ಒಬ್ಬ ಮುಸ್ಲಿಂನಿಗೂ ವೋಟ್ ಹಾಕಿ ಅಂತ ಕೈ ಮುಗಿದು ಕೇಳಿಲ್ಲ.. ಮುಸ್ಲಿಮರ ಬಳಿ ವೋಟ್ ಕೇಳುವುದು ಹಿಜಡಾತನ” ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಬೆಂಗಳೂರಿನ ಪುರಭವನ ಸಭಾಂಗಣದಲ್ಲಿ ಶ್ರೀ ರಾಮ ಸೇನೆ ಆಯೋಜಿಸಿದ್ದ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಾಡಿದಕ್ಕಾಗಿ ಕೇಂದ್ರ ಸರಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ ನೀಡಿರುವ ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ನಮ್ಮ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ 50 ಸಾವಿರ ವೋಟ್ ಗಳಿವೆ. ಆದರೆ ಇದೂವರೆಗೂ ಒಬ್ಬ ಮುಸ್ಲಿಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದರೂ 47 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರ ಭಕ್ತ ಮುಸ್ಲಿಂ ಬಿಜೆಪಿಗೆ ವೋಟ್ ಹಾಕುತ್ತಾರೆ. ಪಾಕಿಸ್ತಾನ ಪರ ಇರೋ ಮುಸ್ಲಿಂ ಬಿಜೆಪಿಗೆ ವೋಟ್ ಹಾಕಲು ಹಿಂದೆ ಮುಂದೆ ನೋಡುತ್ತಾನೆ ಎಂದು ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದ್ದಾರೆ. ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆಲುವು ಸಾಧಿಸುವ ಶಾಸಕರು ಹಿಜಡಾಗಳು ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಹಲವು ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿ ಪಕ್ಷ ಸೇರಲು ಸಿದ್ಧರಿದ್ದಾರೆ. ಆದರೆ, ಅವರಿಗೆ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿನ ಮುಸ್ಲಿಮರ ಮತ ಕೈತಪ್ಪುವ ಭೀತಿ ಇದೆ. ಅಲ್ಲದೆ, ಅವರೆಲ್ಲರೂ ಹಿಜಡಾಗಳು, ಹೀಗಾಗಿಯೇ ಬಿಜೆಪಿ ಸೇರಿಲ್ಲ. ಪಾಕಿಸ್ತಾನವನ್ನು ಬೆಂಬಲಿಸುವವರು ಬಿಜೆಪಿಗೆ ಮತ ನೀಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top