fbpx
ಸಮಾಚಾರ

“ಗೋಮಾಂಸ ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದೆ, ಪುರುಷತ್ವ ಇದ್ದರೇ ಈಶ್ವರಪ್ಪ ಅದನ್ನು ತಡೆಯಲಿ” ಉಗ್ರಪ್ಪ ಸವಾಲು

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಪುರುಷತ್ವದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರಿಗೆ ಪುರುಷತ್ವ ಇದ್ದಿದ್ದೇ ಆದಲ್ಲಿ, ಧಮ್ ಇದ್ದರೆ ವಿದೇಶಕ್ಕೆ ಆಗುತ್ತಿರುವ ಗೋಮಾಂಸ ರಫ್ತು ನಿಲ್ಲಿಸಲಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು “ಉಡಾಫೆ ಮಾತುಗಳನ್ನು ಆಡುವುದು ಸುಲಭ. ಉಡಾಫೆಯಾಗಿ ಮಾತನಾಡುವುದನ್ನು ಬಿಡಬೇಕು. ಈಶ್ವರಪ್ಪಗೆ ನಿಜವಾದ ಪ್ರಾಮಾಣಿಕತೆ, ಪುರುಷತ್ವ ಇರುವುದೇ ಆದಲ್ಲಿ ದೇಶದಿಂದ ವಿದೇಶಕ್ಕೆ ಆಗುತ್ತಿರುವ ಗೋಮಾಂಸ ರಫ್ತು ನಿಲ್ಲಿಸಲಿ. ಗುಜರಾತ್ ನಲ್ಲಿರುವ ಗೋ ಮಾಂಸ ಕಾರ್ಖಾನೆಗಳನ್ನು ಬಂದ್ ಮಾಡಿಸಲಿ” ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರಿಗೆ ಮನುಷ್ಯತ್ವ ಇಲ್ಲ. ನೆರೆ ವಿಚಾರದಲ್ಲಿ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಲಿಲ್ಲ. ಈಶ್ವರಪ್ಪ, ಮಾಧುಸ್ವಾಮಿ, ಲಕ್ಷ್ಮಣ ಸವದಿ ಬಳಸಿರುವ ಪದಗಳು ಅಧಿಕಾರದ ಮದ ನೆತ್ತಿಗೇರಿರುವುದನ್ನು ಸಾಬೀತುಪಡಿಸುತ್ತವೆ. ನಾನು ನೀಲಿ ಚಿತ್ರ ನೋಡಿದ್ದೇನಷ್ಟೇ. ಕಾಂಗ್ರೆಸ್ ಅವರು ನೀಲಿಚಿತ್ರ ಮಾಡುತ್ತಾರೆ ಎಂದು ಸವದಿ ಹೇಳಿದ್ದಾರೆ. ಯಾರು ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸಲಿ. ಒಬ್ಬ ಉನ್ನತ ಹುದ್ದೆಯಲ್ಲಿ ಇರುವವರಿಗೆ ಈ ರೀತಿ ಮಾತು ಜಾರಬಾರದು ಎಂದು ಎಚ್ಚರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top