fbpx
ಸಮಾಚಾರ

“ಹಿಂದಿ ರಾಷ್ಟ್ರ ಭಾಷೆಗೆ ವಿರೋಧಿಸುವವರು ದೇಶವನ್ನು ಪ್ರೀತಿಸುವುದಿಲ್ಲ” ತ್ರಿಪುರಾ ಸಿಎಂ ತಲೆಕೆಟ್ಟ ಹೇಳಿಕೆ ಬಿಪ್ಲಬ್ ಕುಮಾರ್ ದೇಬ್.

ಸದಾ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರಾಗಿರುವ ತ್ರಿಪುರ ಮುಖ್ಯಮಂತ್ರಿ ಈಗ ಭಾಷೆ ವಿಚಾರದಲ್ಲಿ ಮತ್ತೊಂದು ತಲೆ ಕೆಟ್ಟ ಹೇಳಿಕೆ ನೀಡಿದ್ದಾರೆ. “ಹಿಂದಿ ಭಾಷೆಯನ್ನು ಭಾರತದ ರಾಷ್ಟ್ರೀಯ ಭಾಷೆಯನ್ನಾಗಿಸುವುದಕ್ಕೆ ವಿರೋಧ ವ್ಯಕ್ತಪಡಿಸುವವರು ಈ ದೇಶವನ್ನು ಪ್ರೀತಿಸುವುದಿಲ್ಲ” ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹೇಳಿದ್ದಾರೆ.

ಅಗರ್ತಲಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಹಿಂದಿ ಭಾಷೆ ದೇಶವನ್ನು ಒಗ್ಗೂಡಿಸುವ ಭಾಷೆಯಾಗುವ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

“ನಮ್ಮ ದೇಶದ ಹೆಚ್ಚಿನ ಜನರು ಹಿಂದಿ ಮಾತನಾಡುವವರಾಗಿರುವುದರಿಂದ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವುದಕ್ಕೆ ನನ್ನ ಬೆಂಬಲವಿದೆ,‌ರಾಷ್ಟ್ರಭಾಷೆಯಾಗಿ ಹಿಂದಿಯನ್ನು ವಿರೋಧಿಸುವವರಿಗೆ ದೇಶದ ಮೇಲೆ ಪ್ರೀತಿ ಇಲ್ಲ. ದೇಶದ ಹೆಚ್ಚಿನ ಜನರು ಹಿಂದಿ ಮಾತನಾಡುತ್ತಾರೆ. ” ಬಿಪ್ಲಾವ್ ಎಂದಿದ್ದಾರೆ.

ದೇಶಕ್ಕೊಂದು ಅಧಿಕೃತ ಭಾಷೆ ಬೇಕು ಎನ್ನುವ ಮೂಲಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಭಿಪ್ರಾಯ, ಇದೀಗ ಭಾರೀ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಹಿಂದಿ ಭಾಷೆ ಉತ್ತೇಜನದ ವಿರುದ್ಧ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದವೇ ಕೆಂಡವಾಗಿದೆ.. ಈ ನಡುವೆ ತ್ರಿಪುರ ಮುಖ್ಯಮಂತ್ರಿ ಈ ರೀತಿ ಉಡಾಫೆ ಹೇಳಿಕೆ ನೀಡಿರುವ ದಕ್ಷಿಣ ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top