fbpx
ಸಮಾಚಾರ

ಡಿಕೆಶಿ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಎದುರಾಯ್ತು ಸಂಕಷ್ಟ!

ಇಡಿ ಗಾಳಕ್ಕೆ ಡಿಕೆ ಶಿವಕುಮಾರ್ ಸಿಕ್ಕಿರುವ ಹೊತ್ತಿನಲ್ಲೇ ಈಗ ಅವರ ಆಪ್ತರಾಗಿರುವ ಮತ್ತೊಬ್ಬ ಶಾಸಕರಿಗೆ ಇಡಿ ಸಂಕಷ್ಟ ಎದುರಾಗಿದೆ. ಬೆಳಗಾವಿಯ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಕಳುಹಿಸಿದೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸೆ.19 ವಿಚಾರಣೆಗೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಹೋಗಬೇಕಿದೆ.

ಡಿಕೆಶಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಹಿಂದೆಯೂ ಇಡಿ ನೋಟೀಸ್ ನೀಡಿತ್ತು. ಆದರೆ, ಅದಕ್ಕೆ ಬೆಳಗಾವಿ ಶಾಸಕಿ ಸ್ಪಂದಿಸಿರಲಿಲ್ಲ. ಈಗ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ಇಡಿ ನೋಟೀಸ್ ಕಳುಹಿಸಿದೆ ಎನ್ನಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top