fbpx
ಸಮಾಚಾರ

ರಾಜ್ಯದ ಎಲ್ಐಸಿ ಪರೀಕ್ಷೆಯಲ್ಲಿ ಕನ್ನಡಕ್ಕಿಲ್ಲ ಅವಕಾಶ: ಸಂಸದ ಜಿಸಿ ಚಂದ್ರಶೇಖರ್ ಆಕ್ಷೇಪ.

ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆ ನಡೆಸಬೇಕು ಎಂಬ ಆಗ್ರಹವನ್ನು ನಿರ್ಲಕ್ಷ್ಯ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಭಾರತೀಯ ಜೀವ ವಿಮಾ ನಿಗಮದ ರಾಜ್ಯದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ.

 

 

ಭಾರತೀಯ ಜೀವ ವಿಮಾ ನಿಗಮ ದೇಶದಾದ್ಯಂತ ಖಾಲಿ ಇರುವ 8500 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 365 ಅಸಿಸ್ಟಂಟ್ ಹುದ್ದೆಗಳು ಖಾಲಿ ಇದ್ದು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಪರೀಕ್ಷೆಗಳನ್ನು ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿ ಮಾತ್ರ ಬರೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

 

 

ರಾಜ್ಯದ ವಿಭಾಗೀಯ ಕಚೇರಿಗಳಲ್ಲಿ ಖಾಲಿ ಇರುವ 355 ಹುದ್ದೆಗಳ ಭರ್ತಿಗಾಗಿ ನಡೆಸುವ ಪರೀಕ್ಷೆಗಳನ್ನೂ ಕನ್ನಡದಲ್ಲಿ ಬರೆಯುವುದಕ್ಕೆ ಅವಕಾಶ ನೀಡಿಲ್ಲ. ಈ ಬಗ್ಗೆ ಈ ಹುದ್ದೆಗಳ ಆಕಾಂಕ್ಷಿಗಳಾಗಿರುವ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಜಿಸಿ ಚಂದ್ರಶೇಖರ್ ಆಕ್ಷೇಪ:
ಕೇಂದ್ರ ಸರ್ಕಾರದ ಈ ನಡೆಗೆ ಸಂಸದ ಜಿಸಿ ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದು ರಾಜ್ಯದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದ್ವನಿ ಎತ್ತಿದ್ದಾರೆ.

#LICmosa ಕೂಡ #IBPSmosa ದಂತೆ ಅಪಾಯಕಾರಿ. ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಗಳಲ್ಲೇ ಬರೆಯು ಅವಕಾಶ ನೀಡಬೇಕು. ಐಬಿಪಿಎಸ್‌ ಮತ್ತು ಎಲ್‌ಐಸಿ ಮೊದಲಾದ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕು .” ಎಂದು ಸಂಸದ ಜಿಸಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

ಪಾಲಿಸಿ ಮಾಡಿಸುವ, ವಿಮೆ ಕಂತು ಕಟ್ಟಿಸಿಕೊಳ್ಳುವ ಮುಂತಾದ ಕಾರ್ಯನಿರ್ವಹಿಸುವ ಈ ಹುದ್ದೆಗಳ ನೌಕರರು ಕನ್ನಡಿಗರ ಜೊತೆಗೇ ಹೆಚ್ಚಾಗಿ ವ್ಯವಹರಿಸುತ್ತಾರೆ. ಹೀಗಿರುವಾಗ ಈ ಹುದ್ದೆ ಪಡೆಯಲು ಇಂಗ್ಲಿಷ್‌ ಅಥವಾ ಹಿಂದಿ ಭಾಷಾ ಪರೀಕ್ಷೆ ಎದುರಿಸುವ ಹಾಗೂ ಈ ಎರಡು ಭಾಷೆಯಲ್ಲಿ ಪರೀಕ್ಷೆ ಎದುರಿಸಬೇಕೆಂಬ ನಿಯಮ ಹೇರಿರುವುದು ಕನ್ನಡಿಗರಿಗೆ ಮಾಡುತ್ತಿರುವ ವಂಚನೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಭಾರತಕ್ಕೆ ಒಂದೇ ಭಾಷೆ ಇರಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಗಳಲ್ಲೇ ಬರೆಯು ಅವಕಾಶ ನೀಡುವಂತೆ ಬೇಡಿಕೆ ಹೆಚ್ಚಿದೆ. ಅಲ್ಲೆ ಐಬಿಪಿಎಸ್‌ ಮತ್ತು ಎಲ್‌ಐಸಿ ಮೊದಲಾದ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಬೇಡಿಕೆಯೂ ಹೆಚ್ಚಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top