fbpx
ಸಮಾಚಾರ

ಭರ್ಜರಿ ಉದ್ಯೋಗಾವಕಾಶ: 12075 ಕ್ಲರ್ಕ್‌ ಹುದ್ದೆಗೆ ಅರ್ಜಿ ಅಹ್ವಾನ!

ಸ್ಥಳೀಯ ಭಾಷೆಯಲ್ಲಿಯೇ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಬೇಡಿಕೆ ತೀವ್ರಗೊಂಡಿರುವಾಗಲೇ ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ನೇಮಕಾತಿ ಪರ್ವ ಆರಂಭಿಸಿದೆ. ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) 17 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್‌ ಕೇಡರ್‌ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಕೆನರಾ, ಅಲಹಾಬಾದ್, ಬ್ಯಾಂಕ್ ಆಫ್ ಬರೋಡಾ, ಇಂಡಿಯಾ, ಮಹಾರಾಷ್ಟ್ರ, ಕಾಪೋರೇಷನ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿ ಹಲವು ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಭರ್ತಿ ಮಾಡಲು ಪ್ರವೇಶ ಪರೀಕ್ಷೆ ನಡೆಯಲಿದೆ.

12075 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಐಬಿಪಿಎಸ್ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

  • ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
  • ಅರ್ಜಿ ಸಲ್ಲಿಸುವವರಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಸೆಪ್ಟೆಂಬರ್ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ರೂ. 100 ಶುಲ್ಕ, ಉಳಿದ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಸೆಪ್ಟೆಂಬರ್‌ 17ರಿಂದ ಅಕ್ಟೋಬರ್‌ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಹ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ www.ibps.in ನಲ್ಲಿ ಅರ್ಜಿ ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top