fbpx
ಸಮಾಚಾರ

ಉಪಚುನಾವಣೆ: ಟಿಕೆಟ್ ಹಂಚಿಕೆ ಕುರಿತು ನಟ ಜಗ್ಗೇಶ್ ಬಹಿರಂಗ ಅಸಮಾಧಾನ!

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಭಿನ್ನಮತ ವ್ಯಕ್ತವಾಗಿದೆ. ಈ ಬಗ್ಗೆ ನಟ ಹಾಗೂ ಮಾಜಿ ಶಾಸಕ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

 

 

ಬೈ ಎಲೆಕ್ಷನ್ ಬಂತು! 2018ರಲ್ಲಿ ಕಡೆಘಳಿಗೆ ಅಭ್ಯರ್ಥಿಯಾದ ನಾನು ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ. ತನು, ಮನ, ಧನ ಕಳೆದುಕೊಂಡು 9 ದಿನದಲ್ಲಿ 60,400 ಮತಗಳನ್ನು ಪಡೆದ ಅಭ್ಯರ್ಥಿ ನಾನು! ಮೌನವಾಗಿ ಇರಲೋ? ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ..? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ..? ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ! ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಇದಕ್ಕೆ ಬಿಜೆಪಿ ಕರ್ನಾಟಕ ಮತ್ತು ಬಿ.ಎಸ್.ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಜಗ್ಗೇಶ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ 59,308 ಮತಗಳನ್ನು ಪಡೆದು ಸೋತಿದ್ದರು. ಈ ವೇಳೆ ಭರ್ಜರಿ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಸ್.ಟಿ.ಸೋಮಶೇರ್ 1,15,273 ಮತಗಳನ್ನು ಪಡೆದು ಗೆಲವು ಸಾಧಿಸಿದ್ದರು. ಜೆಡಿಎಸ್‍ನ ಅಭ್ಯರ್ಥಿ 1,04,562 ಮತಗಳನ್ನು ಗಳಿಸಿ ಪರಾಭವಗೊಂಡಿದ್ದರು.

ಒಂದು ವೇಳೆ ಸುಪ್ರೀಂಕೋರ್ಟ್ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ಯಶವಂತಪುರ ಕ್ಷೇತ್ರದ ಬಿಜೆಪಿ ಎಸ್.ಟಿ.ಸೋಮಶೇಖರ್ ಅವರಿಗೆ ಹೋಗುತ್ತದೆ. ಇದರಿಂದ ತಮ್ಮ ಸ್ಪರ್ಧೆಗೆ ಹಿನ್ನಡೆಯಾಗುತ್ತದೆ ಎನ್ನುವುದು ಜಗ್ಗೇಶ್ ಅವರ ವಿಚಾರವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top