fbpx
ಸಮಾಚಾರ

ಸಿದ್ದು ಪುತ್ರ ರಾಕೇಶ್ ಸಾವಿಗೆ ಆ ‘ಬಚ್ಚಾ’ ಕಾರಣ: ಎಂಟಿಬಿ ನಾಗರಾಜ್ ಸ್ಪೋಟಕ ಹೇಳಿಕೆ!

ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವನ್ನಪ್ಪಲು ಭೈರತಿ ಸುರೇಶ್ ನೇರ ಕಾರಣ. ರಾಕೇಶ್ ಅವರನ್ನು ಹಾಳು ಮಾಡಿದ್ದೇ ಭೈರತಿ ಸುರೇಶ್ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ನಿನ್ನೆ ಶನಿವಾರ ಹೊಸಕೋಟೆಯಲ್ಲಿ ಕಾಂಗ್ರೆಸ್ ಸ್ವಾಭಿಮಾನ ಸಮಾವೇಶ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೃಷ್ಣ ಭೈರೇಗೌಡ ಸೇರಿದಂತೆ ಕಾಂಗ್ರೆಸ್ ನ ನಾಯಕರು ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮಾತಿಗೆ ಇಂದು ಪ್ರತಿಕ್ರಿಯಿಸಿರುವ ಎಂಟಿಬಿ ತನ್ನ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

“ನನ್ನ ಎದುರು ಭೈರತಿ ಸುರೇಶ್​ ಬಚ್ಚಾ, ಅವನ ಬಂಡವಾಳ ನನಗೆ ಗೊತ್ತು. ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಸಾವನ್ನಪ್ಪಲು ಬೈರತಿ ಸುರೇಶ್ ನೇರ ಕಾರಣ . ರಾಕೇಶ್ ಸಿದ್ದರಾಮಯ್ಯನನ್ನು ಹಾಳು ಮಾಡಿದ್ದೇ ಆತ. ಇನ್ನೂ ನೂರು ವರ್ಷ ಬದುಕಿ ಬಾಳಬೇಕಿದ್ದ ವ್ಯಕ್ತಿಗೆ ಕುಡಿಯುವುದನ್ನು ಕಲಿಸಿ ಸಾಯಿಸಿದ್ದು ನನಗೆ ಗೊತ್ತಿದೆ ಎಂದು ಭೈರತಿ ಸುರೇಶ್​ ವಿರುದ್ಧ ಎಂಟಿಬಿ ಕಿಡಿಕಾರಿದ್ದಾರೆ.

 

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧವೂ ಕಿಡಿ ಕಾರಿದ ಎಂಟಿಬಿ “ಸಿದ್ದರಾಮಯ್ಯ ಕಾಂಗ್ರೆಸ್‍ಗೆ ಬರುವ ಮುನ್ನವೇ ನಾನು ಶಾಸಕನಾಗಿದ್ದೆ. ಎಸ್.ಎಂ.ಕೃಷ್ಣ ನನಗೆ ಟಿಕೆಟ್ ನೀಡಿದ್ದು, ಸಿದ್ದರಾಮಯ್ಯ ಅಲ್ಲ. ನನ್ನ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ.” ಎಂದು ತಿರುಗೇಟು ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top