fbpx
ಸಮಾಚಾರ

ಭರ್ಜರಿ ಉದ್ಯೋಗಾವಕಾಶ: ಎಲ್ಐಸಿಯಿಂದ 8500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ ದೇಶದಾದ್ಯಂತ ಖಾಲಿ ಇರುವ 8500 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 365 ಅಸಿಸ್ಟಂಟ್ ಹುದ್ದೆಗಳು ಖಾಲಿ ಇದ್ದು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಪರೀಕ್ಷೆಗಳನ್ನು ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿ ಮಾತ್ರ ಬರೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ನೇಮಕಾತಿಯ ಮೂಲಕ ದೇಶದ ವಿವಿಧ ಪ್ರದೇಶಗಳಲ್ಲಿರುವ ವಿಭಾಗೀಯ ಕಚೇರಿಗಳಲ್ಲಿ ಸಹಾಯಕ (ಎಲ್‌ಐಸಿ ಸಹಾಯಕ) ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ಹುದ್ದೆಗಳ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅಕ್ಟೋಬರ್ 1 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ. ಈ ಹುದ್ದೆಗಳ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮದ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬ್ಯಾಚುಲರ್ ಡಿಗ್ರಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. (1 ಸೆಪ್ಟೆಂಬರ್ 2019ಕ್ಕೆ ಅನ್ವಯವಾಗುವಂತೆ).

ಆಯ್ಕೆ ಪ್ರಕ್ರಿಯೆ:
ಪೂರ್ವ ಮತ್ತು ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಎರಡೂ ಪರೀಕ್ಷೆಗಳು ಆನ್‌ಲೈನ್‌ನಲ್ಲಿರಲಿವೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಇದರ ನಂತರ, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಈ ಲಿಂಕ್​​ ibpsonline.ibps.in ಕ್ಲಿಕ್ ಮಾಡಿ ಅಪ್ಲಿಕೇಶನ್ ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top