fbpx
ಸಮಾಚಾರ

“ನೆರೆ ಪರಿಹಾರಕ್ಕೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ” ಎಂದಿದ್ದ ತೇಜಸ್ವಿ ಸೂರ್ಯಗೆ ಯಡಿಯೂರಪ್ಪ ತರಾಟೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಜ್ಯದ ನೆಲ, ಜಲ, ಭಾಷೆ ಸೇರಿದಂತೆ ಪ್ರಮುಖ ವಿಷಯಗಳಲ್ಲಿ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆ ನೀಡಬಾರದು ” ಎಂದು ತ್ವಜಸ್ವಿ ಸೂರ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಗದರಿದ್ದಾರೆ ಎನ್ನಲಾಗಿದೆ.

“ಕೇಂದ್ರ ಸರ್ಕಾರದಿಂದ ನೆರೆ ಪರಿಹಾರಕ್ಕೆ ಹಣ ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನೆ ಕೇಳಿದಾಗ ನೀಡುವ ಉತ್ತರ ಸಿಟ್ಟಿಗೇಳಿಸುವಂತೆ ಇರಬಾರದು. ಹೀಗೆ ಪ್ರಶ್ನೆ ಮಾಡುವುದು ರಾಜ್ಯದ ಜನರ ಹಕ್ಕು” ಎಂದು ತೇಜಸ್ವಿ ಸೂರ್ಯಗೆ ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.

ತೇಜಸ್ವಿ ಸೂರ್ಯ ಹೇಳಿದ್ದೇನು?
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ ”ಪ್ರಧಾನಿ ನರೇಂದ್ರ ಮೋದಿ 14ನೇ ಹಣಕಾಸು ಆಯೋಗ ಜಾರಿ ಸಂದರ್ಭದಲ್ಲಿ ಎಲ್ಲರಾಜ್ಯಗಳಿಗೆ ಹೆಚ್ಚಿನ ಅನುದಾನ ಮೀಸಲಿರಿಸಿ ಆರ್ಥಿಕ ಶಕ್ತಿ ನೀಡಿದ್ದಾರೆ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರಕಾರ ಈಗಾಗಲೇ ಸಂತ್ರಸ್ತರಿಗೆ ನೆರೆ ಪರಿಹಾರ ಘೋಷಿಸಿದೆ”

ನಮ್ಮ ರಾಜ್ಯ ಸರ್ಕಾರ ಆರ್ಥಿಕ ಸದೃಡವಾಗಿದೆ. ಆದುದರಿಂದ ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದಿಂದಲೇ ಸಿಎಂ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ವಿರೋಧ ಪಕ್ಷಗಳ ಆರೋಪ ಅರ್ಥಹೀನ ಎಂದು ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top