fbpx
ಸಮಾಚಾರ

ಅನರ್ಹ ಶಾಸಕರಿಗೆ ಮತ್ತಷ್ಟು ಟೆನ್ಷನ್: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್!

ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

 

 

ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ತಮ್ಮನ್ನು ಅನರ್ಹಗೊಳಿಸಿದ ಕ್ರಮವನ್ನು ಪ್ರಶ್ನಿಸಿ 17 ಮಂದಿ ಶಾಸಕರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈಗಾಗಲೇ ಎರಡು ಬಾರಿ ಅರ್ಜಿ ವಿಚಾರಣೆ ಮುಂದೂಡಿದ್ದ ಸುಪ್ರೀಂಕೋರ್ಟ್​ ಇಂದು ಕೈಗೆತ್ತಿಕೊಂಡಿತ್ತು. ಆದರೂ, ನ್ಯಾಯಾಲಯ ಅನರ್ಹರ ಕುರಿತ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಹೀಗಾಗಿ ಅನರ್ಹರಿಗೆ ಸದ್ಯಕ್ಕಂತು ರಿಲೀಫ್ ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.

2 ದಿನಗಳ ಹಿಂದೆಯೇ ನವದೆಹಲಿಗೆ ತೆರಳಿರುವ ಎಲ್ಲಾ 17 ಅನರ್ಹ ಶಾಸಕರು ತಮ್ಮ ಪರ ವಕೀಲ ಮುಕುಲ್ ರೋಹ್ಟಗಿ ಜೊತೆ ಚರ್ಚೆ ನಡೆಸಿದ್ದರು. ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆ. 30 ಕೊನೆಯ ದಿನವಾಗಿರುವುದರಿಂದ ಅನರ್ಹ ಶಾಸಕರಿಗೆ ಆತಂಕ ಶುರುವಾಗಿದೆ. ಹೀಗಾಗಿ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಚುನಾವಣೆಗೆ ತಡೆ ನೀಡುವಂತೆ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಅನರ್ಹ ಶಾಸಕರು ಅರ್ಜಿ ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top