fbpx
ಸಮಾಚಾರ

‘ಕೆಜಿಎಫ್‌ 2’ ಚಿತ್ರತಂಡದಿಂದ ಹೊರಬಿತ್ತು ಅಭಿಮಾನಿಗಳು ಸಂಭ್ರಮಿಸುವಂತಹ ಸುದ್ದಿ!

2018ರಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಮಾಡಿತ್ತು. ಕೆಜಿಎಫ್-2 ಚಿತ್ರತಂಡ ಸರಳವಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನು ಆರಂಭಿಸಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಸೆಟ್ ಫೋಟೋಗಳು ಸದ್ದು ಮಾಡಿದ್ದವು. ಕೆಜಿಎಫ್ ನಿರೀಕ್ಷೆಗಳ ಪರ್ವತವನ್ನೇ ಹುಟ್ಟಿಸಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಕೆಜಿಎಫ್ 2ಗಾಗಿ ದೇಶವೇ ಎದುರು ನೋಡುತ್ತಿದೆ.

ಈ ನಡುವೆ ‘ಕೆಜಿಎಫ್‌ 2’ ಚಿತ್ರತಂಡದಿಂದ ಹೊಸ ಸುದ್ದಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದರು. ಅದರಂತೆ ಇಂದು ಹೊಸ ಸುದ್ದಿ ನೀಡಿದ್ದು ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಸಂಜಯ್ ದತ್ ಚಿತ್ರೀಕರಣದ ಸೆಟ್ ಗೆ ಎಂಟ್ರಿಕೊಟ್ಟಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕಾರ್ಯಕಾರಿ ನಿರ್ಮಾಪಕ ಕಾರ್ತಿ ಗೌಡ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಪ್ರಶಾಂತ್ ನೀಲ್ ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.

ಸೂರ್ಯವರ್ಧನ್‌ ‘ಕೆಜಿಎಫ್‌ ಚಾಪ್ಟರ್‌ 1’ ಚಿತ್ರದ ಪ್ರಮುಖ ವಿಲನ್. ಅಧೀರ ಅವನ ಸಹೋದರ. ಮೊದಲ ಭಾಗದಲ್ಲಿ ನಿರ್ದೇಶಕರು ಅಧೀರನ ಮುಖವನ್ನು ತೋರಿಸಿರಲಿಲ್ಲ. ಹಾಗಾಗಿ, ಈ ಪಾತ್ರವನ್ನು ಯಾರು ನಿಭಾಯಿಸುತ್ತಾರೆ ಎನ್ನುವ ಬಗ್ಗೆ ಜನರಿಗೆ ಕುತೂಹಲ ಮೂಡಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top