fbpx
ಸಮಾಚಾರ

ಖ್ಯಾತ ಹಾಸ್ಯ ನಟ ವೇಣು ಮಾಧವ್ ವಿಧಿವಶ!

ತೆಲುಗು ಖ್ಯಾತ ಕಾಮಿಡಿ ನಟ ವೇಣು ಮಾಧವ್ ಅನಾರೋಗ್ಯದಿಂದ ಇಂದು ಹೈದರಾಬಾದ್ ನಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೇಣು ಮಾಧವ್ (39) ಅವರನ್ನು ಸಿಕಿಂದ್ರಾಬಾದ್‌ನ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚ್ಹಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವೇಣು ಮಾಧವ್ ಅವರಿಗೆ ಅವರಿಗೆ ಯಕೃತ್ ಕಸಿ ಮಾಡುವ ಅವಶ್ಯಕತೆ ಇತ್ತು. ಆದರೆ ವೇಣು ಮಾಧವ್ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ನಿಧನರಾಗಿದ್ದಾರೆ. ಬುಧವಾರ ಮಧ್ಯಾಹ್ನ 12.20ಕ್ಕೆ ಕೊನೆಯುಸಿರೆಳೆದಿದ್ದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇವರು ತೆಲುಗು, ತಮಿಳು ಸೇರಿದಂತೆ ಅನೇಕ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದುವರೆಗೂ 170ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟ ಚಿರಂಜೀವಿ, ಪ್ರಭಾಸ್, ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಸೇರಿದಂತೆ ಅನೇಕ ಮೇರು ನಟರ ಜೊತೆ ನಟಿಸಿದ್ದರು.

1996ರಲ್ಲಿ ಬಿಡುಗಡೆಯಾದ ‘ಸಂಪ್ರದಾಯಂ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಅಡಿಯಿಟ್ಟರು. 2016ರಲ್ಲಿ ಡಾ.ಪರಮಾನಂದಯ್ಯನವರ ಸ್ಟೂಡೆಂಟ್ಸ್ ಗ್ಯಾಂಗ್ ಸಿನಿಮಾ ವೇಣು ಮಾಧವ್ ಅಭಿನಯದ ಕೊನೆಯ ಚಿತ್ರ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top