fbpx
ಸಮಾಚಾರ

‘ಶ್ರೀಮನ್ನಾರಾಯಣನ’ ಆಗಮನಕ್ಕೆ ದಿನಾಂಕ ಫಿಕ್ಸ್! ರಿಲೀಸ್ ಆಗೋದು ಯಾವಾಗ ಗೊತ್ತಾ?

2016ರಲ್ಲಿ ತೆರೆ ಕಂಡ ‘ಕಿರಿಕ್ ಪಾರ್ಟಿ’ ಸಿನಿಮಾದ ನಂತರ, ನಟ ರಕ್ಷಿತ್ ಶೆಟ್ಟಿ ನಟನೆಯ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲಾ. ಹೀಗಾಗಿ ಇವರ ಮುಂದಿನ ಸಿನಿಮಾ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳು ಹುಟ್ಟುಕೊಂಡಿವೆ. ಆದರೆ ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತೆ ಎಂಬ ಪ್ರಶ್ನೆ ಸಿನಿಪ್ರೇಮಿಗಳನ್ನು ಕಾಡುತ್ತಿರೋದು ಸುಳ್ಳಲ್ಲಾ. ಹೀಗಾಗಿ ಈ ಪ್ರಶ್ನೆಗೆ ಸ್ವತಃ ಚಿತ್ರತಂಡವೇ ನಿಖರವಾದ ಉತ್ತರ ನೀಡಿದೆ.

 

 

ಈ ಸಿನಿಮಾದ ರಿಲೀಸ್ ಯಾವಾಗ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸುಳಿವು ನೀಡಿದ್ದಾರೆ. ”ಇನ್ನು 70 ದಿನಗಳೊಳಗೆ ಅವನು ಬಂದೆ ಬರ್ತಾನೆ” ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬಿಡುಗಡೆಯ ದಿನಾಂಕದ ಬಗ್ಗೆ ಮಾತನಾಡಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಇನ್ನು 70 ದಿನದೊಳಗೆ ಸಿನಿಮಾ ರಿಲೀಸ್ ಆಗೋದು ಪಕ್ಕಾ ಅನ್ನೋ ಮಾಹಿತಿಯ ಸುಳಿವನ್ನು ನಿರ್ಮಾಪಕ ಮಲ್ಲಿಕಾರ್ಜುನಯ್ಯ ಹೊರಹಾಕಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಹಲವು ಭಾಷೆಗಳಲ್ಲಿ ಬರ್ತಿರೋದ್ರಿಂದ ರಿಲೀಸ್​ಗೆ ಚಿತ್ರತಂಡ ತುಂಬಾನೇ ಪ್ಲಾನ್ ಮಾಡಿದ್ದು ಸದ್ಯದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡೋದಾಗಿ ಹೇಳಿದ್ದಾರೆ.

ಈ ಹಿಂದೆ ಯಾವ ಚಿತ್ರಗಳಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ರಕ್ಷಿತ್ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ಶಾನ್ವಿ ಶ್ರೀವಾತ್ಸವ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ನವ ನಿರ್ದೇಶಕ ಸಚಿನ್ ಆಕ್ಷನ್ ಕಟ್ ಹೇಳ್ತಿದ್ದು ಪುಷ್ಕರ್ ಸಿನಿಮಾಸ್ ಹಾಗೂ ಪರಂವಾ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಉಳಿದಂತೆ ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top