fbpx
ಸಮಾಚಾರ

ನೆರೆ ಪರಿಹಾರಕ್ಕೆ ಹಣವಿಲ್ಲ ಎಂದು ಒಪ್ಪಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರೆ ಪರಿಹಾರಕ್ಕೆ ಹಣವಿಲ್ಲ ಅಂತ ಒಪ್ಪಿಕೊಂಡಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳಬಾಳು ಮಠದಲ್ಲಿ ಮಂಗಳವಾರ ನಡೆದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 27ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ “ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರಾಜ್ಯ ತತ್ತರಿಸಿ ಹೋಗಿದೆ. ಕಂಡರಿಯದ ನೆರೆಗೆ ಮನೆ, ರಸ್ತೆ, ಸೇತುವೆ ಕೊಚ್ಚಿಹೋಗಿವೆ. ನೆರೆ ಪರಿಹಾರವಾಗಿ ₹ 2,500 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಬೊಕ್ಕಸದಲ್ಲಿರುವ ಹಣ ನೆರೆ ಪರಿಹಾರಕ್ಕೆ ಸಾಕಾಗುತ್ತಿಲ್ಲ. ಕೇಂದ್ರ ಸರ್ಕಾರ ಶೀಘ್ರ ಪರಿಹಾರ ಬಿಡುಗಡೆ ಮಾಡಲಿದೆ’ ಎಂದರು.

“ಕೇಂದ್ರ ಸರ್ಕಾರವು ಮುಂದಿನ ನಾಲ್ಕೈದು ದಿನಗಳಲ್ಲಿ ನೆರೆ ಪರಿಹಾರ ಹಣವನ್ನು ನೀಡುತ್ತದೆ ಎನ್ನುವ ಭರವಸೆ ಇದೆ. ರಾಜ್ಯ ಸರ್ಕಾರದ ಕೆಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಚಿಂತನೆ ನಡೆದಿದೆ. ಈ ಹಿಂದೆಂದೂ ನೀಡದಷ್ಟು ಹಣವನ್ನು ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ನೀಡಲಾಗುತ್ತದೆ. ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ಹಾಗೂ ಭಾಗಶಃ ಹಾನಿಗೆ ಒಂದು ಲಕ್ಷ ಕೊಡಲಾಗುತ್ತಿದೆ. ಮೊದಲಗಂತದಲ್ಲಿ ಸಂತ್ರಸ್ತರಿಗೆ ₹ 1 ಲಕ್ಷ ಬಿಡುಗಡೆ ಮಾಡಲಾಗಿದೆ. “ಎಂದರು,

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top