fbpx
ಸಮಾಚಾರ

ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರು ಗುರುವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ಇಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ತಿರಸ್ಕರಿದ್ದರು. ಹೀಗಾಗಿ ಅಕ್ಟೋಬರ್ 1ರವರೆಗೆ ತಿಹಾರ್ ಜೈಲಿನಲ್ಲೇ ಡಿಕೆಶಿ ಕಾಲ ಕಳೆಯಬೇಕಿದೆ. ಈ ಆದೇಶದಿಂದ ಅವರು ಅಕ್ಟೋಬರ್‌ 1ರ ವರೆಗೆ ತಿಹಾರ್‌ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.

ಹೇಗಾದರೂ ಮಾಡಿ ಜೈಲಿನಿಂದ ಹೊರಬರಬೇಕು ಎಂದು ಯತ್ನಿಸುತ್ತಿರುವ ಶಿವಕುಮಾರ್‌, ಬುಧವಾರವೇ ತಮ್ಮ ವಕೀಲರ ಮೂಲಕ ದೆಹಲಿ ಹೈಕೋರ್ಟ್‌ ಮೊರೆ ಹೋಗಲು ಸಿದ್ಧತೆ ನಡೆಸಿದ್ದರು. ಅದರಂತೆ ಡಿ.ಕೆ. ಶಿವಕುಮಾರ್‌ ಪರ ವಕೀಲರು ಗುರುವಾರ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿರುವ ದೆಹಲಿ ಹೈಕೋರ್ಟ್​ ಬೆಳಗ್ಗೆಯಿಂದ ಈ ಪ್ರಕರಣದ ವಾದ ಪ್ರತಿವಾದ ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಇಂದಾದರೂ ಡಿಕೆಶಿ ಗೆ ಜಾಮೀನು ಲಭ್ಯವಾಗುತ್ತಾ ಎಂಬ ಕಾತರ ರಾಜ್ಯ ಕಾಂಗ್ರೆಸ್​ ವಲಯದಲ್ಲಿ ಮನೆಮಾಡಿದೆ.

ವಾದ ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್​ ತೀರ್ಪನ್ನು ಕಾಯ್ದಿರಿಸಿದ್ದು, ಸಂಜೆ ವೇಳೆಗೆ ಡಿಕೆಶಿ ಜಾಮೀನು ಅರ್ಜಿಗೆ ತಾರ್ಕಿಕ ಅಂತ್ಯ ಪ್ರಾಪ್ತವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top