fbpx
ಸಮಾಚಾರ

ಉಪಚುನಾವಣೆ ಮುಂದೂಡಿದ ಸುಪ್ರೀಂ ಕೋರ್ಟ್: ಅನರ್ಹರಿಗೆ ಬಿಗ್ ರಿಲೀಫ್

ಕಾಂಗ್ರೆಸ್​-ಜೆಡಿಎಸ್​ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಇಂದು ಮತ್ತೆ ಕೈಗೆತ್ತಿಕೊಂಡಿದ್ದು, ಉಪಚುನಾವಣೆಗೆ ತಾತ್ಕಾಲಿಕ ತಡೆ ನೀಡಿದೆ. ಅನರ್ಹ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ಸಂಪೂರ್ಣ ಮುಗಿದ ಮೇಲೆ ಚುನಾವಣೆಗೆ ಹೋಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಉಪಚುನಾವಣೆಗೆ ತಡೆ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಿದೆ. ರಾಜ್ಯದ 17 ಶಾಸಕರ ಅನರ್ಹತೆ ಮುಂದಿವರಿದಿದೆ. ತೆರವಾದ ಕ್ಷೇತ್ರಗಳನ್ನು 6 ತಿಂಗಳಿಗಿಂತ ಹೆಚ್ಚು ಕಾಲ ಖಾಲಿ ಬಿಡುವಂತಿಲ್ಲ. ಹೀಗಾಗಿ 6 ತಿಂಗಳೊಳಗೆ ಸುಪ್ರೀಂ ಕೋರ್ಟ್‌ ಆದೇಶ ಹೊರಬೀಳಲಿದೆ.

ಅನರ್ಹ ಶಾಸಕರ ಮೇಲ್ಮನವಿ ಅರ್ಜಿ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಆರಂಭವಾಗಿತ್ತು. ಬುಧವಾರ ಅನರ್ಹ ಶಾಸಕರ ಪರ ವಕೀಲರು ವಾದ ಮಂಡಿಸಿದ್ದರು. ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು. ಇಂದು ಕಾಂಗ್ರಸ್‌ ಪರ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದ್ದರು.

ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಬೆಳಗ್ಗೆಯಿಂದಲೇ ವಾದ-ಪ್ರತಿವಾದಗಳು ನಡೆದವು. ಚುನಾವಣಾ ಆಯೋಗದ ಪರವಾಗಿಯೂ ವಕೀಲರು ಹಾಜರಾಗಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್ ಚುನಾವಣೆಗೆ ತಡೆ ನೀಡಿದ್ದು ಸದ್ಯ ರಾಜ್ಯದಲ್ಲಿ ಆರಂಭವಾಗಿದ್ದ ರಾಜಕೀಯ ಬಿಸಿ ತಣ್ಣಗಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top