fbpx
ಸಮಾಚಾರ

ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ.

ವಿಷ್ಣು ಸೇನಾ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಸಾಹಸ ಸಿಂಹ ಅಭಿನವ ಬಾರ್ಗವ ಡಾ||ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರಿಗೆ ನೀಡಲಾಗುತ್ತಿದೆ..

 

 

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಮತ್ತು ವಿಷ್ಣು ಅಭಿಮಾನಿಗಳ ಉಪಸ್ಥಿತಿ ಇರಲಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 11ರಂದು ಸಂಜೆ 4.30 ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಲಿದೆ.

ಅಂದಹಾಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿ ವರ್ಷ ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮೊದಲನೇ ವರ್ಷ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ, 2ನೇ ವರ್ಷ ರೆಬೆಲ್ ಸ್ಟಾರ್ ಡಾ.ಅಂಬರೀಷ್ ಅವರಿಗೆ, 3ನೇ ವರ್ಷ ಹಿರಿಯ ನಟಿ ಡಾ.ಲೀಲಾವತಿ ಅವರಿಗೆ, 4ನೇ ವರ್ಷ ಡಾ.ಗಿರೀಶ್ ಕಾಸರವಳ್ಳಿ 5ನೇ ವರ್ಷ ರಮೇಶ್ ಭಟ್ ಅವರಿಗೆ ನೀಡಲಾಗಿತ್ತು. ಅಂತೆಯೇ ಈ ವರ್ಷ ವಿಷ್ಣುವರ್ಧನ್ ಅವರ ಆಪ್ತ ಬಳಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರಿಗೆ ನೀಡಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top