fbpx
ಸಮಾಚಾರ

ಸೋಷಿಯಲ್‌ ಮೀಡಿಯಾ ಮುಖ್ಯಸ್ಥೆ ಸ್ಥಾನದಿಂದ ರಮ್ಯಾಗೆ ಗೇಟ್‍ಪಾಸ್: ಗುಜರಾತ್ ವ್ಯಕ್ತಿಗೆ ಮಣೆ

ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದ ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

 

 

ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

ಮೂಲತಃ ಗುಜರಾತಿನವರಾದ ರೋಹನ್ ಗುಪ್ತಾ, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮದ ಜವಾದ್ಬಾರಿಯನ್ನು ಹೊತ್ತು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಹಿನ್ನಲೆಯಲ್ಲಿ ಅವರ ಈ ಅನುಭವಕ್ಕೆ ಮನ್ನಣೆ ನೀಡಿ ಕಾಂಗ್ರೆಸ್ ಅವರನ್ನು ಪಕ್ಷದ ಸೋಶಿಯಲ್ ಮೀಡಿಯಾದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

2013ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯ ಗಳಿಸಿದ್ದ ರಮ್ಯಾ ಆರು ತಿಂಗಳ ಸಂಸದೆಯಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡರು. ಆ ನಂತರ ರಾಹುಲ್‌ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಮ್ಯಾಗೆ ಎಐಸಿಸಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥ ಹುದ್ದೆ ನೀಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top