fbpx
ಸಮಾಚಾರ

“ಕೇಂದ್ರದ ಬಳಿ ನಾವೇನು ಭಿಕ್ಷೆ ಕೇಳುತ್ತಿಲ್ಲ- ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು” ಬಸನಗೌಡ ಪಾಟೀಲ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ.

ಕರ್ನಾಟಕದಲ್ಲಿ ಹಣವಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದರೆ ನಾನು ಸುಮ್ಮನೆ ಕೂರುವುದಿಲ್ಲ. ಬೇಜವಾಬ್ದಾರಿಯುತ ಹೇಳಿಕೆಗೆ ಉತ್ತರ ಕರ್ನಾಟಕ ಕಣ್ಣು ಮುಚ್ಚಿ ಕೂರುವುದಿಲ್ಲ. ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು” ನಾವೇನು ಕೇಂದ್ರದಿಂದ ಭೀಕ್ಷೆ ಕೇಳುತ್ತಿಲ್ಲ. ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ. ಬೇಜವಾಬ್ದಾರಿಯುತ ಹೇಳಿಕೆ ನೀಡುವವರು ಸ್ಥಳಕ್ಕೆ ಬಂದು ನೋಡಬೇಕು ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಬಂದಿಲ್ಲ. ಉತ್ತರ ಕರ್ನಾಟಕದ ಜನಜೀವನ ಅಸ್ತವ್ಯಸ್ತವಾಗಿದೆ. ತಕ್ಷಣ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು. ಇದಕ್ಕಾಗಿ ಎಲ್ಲ ಸಂಸದರು ಹಾಗೂ ಸಚಿವರು ಪ್ರಧಾನಿ ಮೋದಿ ಬಳಿ ನಿಯೋಗ ತೆಗೆದುಕೊಂಡು ಹೋಗಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ತೇಜಸ್ವಿ ಸೂರ್ಯ ಹೇಳಿದ್ದೇನು?
ಸುದ್ದಿಗಾರರೊಂದಿಗೆ ಮಾತನಾಡಿದ್ದ ತೇಜಸ್ವಿ ಸೂರ್ಯ ”ಪ್ರಧಾನಿ ನರೇಂದ್ರ ಮೋದಿ 14ನೇ ಹಣಕಾಸು ಆಯೋಗ ಜಾರಿ ಸಂದರ್ಭದಲ್ಲಿ ಎಲ್ಲರಾಜ್ಯಗಳಿಗೆ ಹೆಚ್ಚಿನ ಅನುದಾನ ಮೀಸಲಿರಿಸಿ ಆರ್ಥಿಕ ಶಕ್ತಿ ನೀಡಿದ್ದಾರೆ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರಕಾರ ಈಗಾಗಲೇ ಸಂತ್ರಸ್ತರಿಗೆ ನೆರೆ ಪರಿಹಾರ ಘೋಷಿಸಿದೆ”

ನಮ್ಮ ರಾಜ್ಯ ಸರ್ಕಾರ ಆರ್ಥಿಕ ಸದೃಡವಾಗಿದೆ. ಆದುದರಿಂದ ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದಿಂದಲೇ ಸಿಎಂ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ವಿರೋಧ ಪಕ್ಷಗಳ ಆರೋಪ ಅರ್ಥಹೀನ ಎಂದು ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top