fbpx
ಸಮಾಚಾರ

ಪೊಲೀಸ್‌ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 3026 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ವಿಭಾಗದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR ) ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳ ನೇರ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 23, 2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 17, 2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 19, 2019

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ- 250 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ- 100 ರೂ.

ವಿದ್ಯಾರ್ಹತೆಯ ವಿವರಗಳು:
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು.

ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಅರ್ಜಿ ಸಲ್ಲಿಸುವವರು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು.

ವಯೋಮಿತಿ:
ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಕನಿಷ್ಢ 19 ವರ್ಷ, ಗರಿಷ್ಠ 25 ವರ್ಷ. ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಕನಿಷ್ಢ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ,ಎಸ್ಟಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಬುಡಕಟ್ಟು ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದೇಹದಾರ್ಡ್ಯತೆ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆಗಳ ಪರಿಶೀಲನೆಯೊಂದಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ www.ksp.gov.in ಸಂಪರ್ಕಿಸಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top