fbpx
ಸಮಾಚಾರ

“ಎಲ್ಲಾ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್, ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು” ಕೊನೆಗೂ ಸ್ಪಷ್ಟನೇ ನೀಡಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಕಾರಣರಾದ ಎಲ್ಲ ಅನರ್ಹ ಶಾಸಕರಿಗೆ 15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಶಿಕಾರಿಪುದರಲ್ಲಿ ಮಾತನಾಡಿದ‌ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಎಲ್ಲಾ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತೇವೆ. ಇದಕ್ಕೆ ಅಮಿತ್ ಶಾ ಕೂಡಾ ಒಪ್ಪಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ. ಅನರ್ಹ ಶಾಸಕರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಅನರ್ಹರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಹಕರಿಸಿದ್ದಾರೆ. ಹೀಗಾಗಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. 15 ಕ್ಷೇತ್ರದಲ್ಲೂ ಗೆಲುವು ಸಾಧಿಸಬೇಕು” ಎಂದು ಹೇಳುವ ಮೂಲಕ ಅನರ್ಹರಿಗೆ ಟಿಕೆಟ್ ಶತಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಅಂದಹಾಗೆ ಹಿಂದಿನ ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆಯಿಂದ ತೆರವಾದ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top