fbpx
ಸಮಾಚಾರ

ನಾನು ಒಂದು ರೀತಿ ತಂತಿಮೇಲೆ ನಡೆಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ ಅಸಹಾಯಕತೆ ಮಾತು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ನಾನು ಸಾಂದರ್ಭಿಕ ಶಿಶು, ವಿಷಕಂಠ ಎಂಬಿತ್ಯಾದಿ ಹೇಳಿಕೆಗಳನ್ನು ನೀಡಿದ್ದರು, ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಹ ಅದೇ ರೀತಿಯ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಹೈಸ್ಕೂಲ್‌ ಮೈದಾನದಲ್ಲಿಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ನೇತೃತ್ವದಲ್ಲಿಭಾನುವಾರ ಹಮ್ಮಿಕೊಂಡಿದ್ದ 28ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. “ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ, ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ. ನಿರ್ಧಾರ ತೆಗೆದುಕೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಹೇಗೆ ಪರಿಣಾಮ ಎನಾಗುತ್ತದೆ ಎಂಬುದನ್ನೂ ಚಿಂತನೆ ಮಾಡಬೇಕಾಗಿದೆ ಎಂದು ಭಾವನಾತ್ಮಕವಾಗಿ ನುಡಿದಿದ್ದಾರೆ.”

ಯಡಿಯೂರಪ್ಪ ಯಾವ ಪಕ್ಷದ ಸಹಾಯವಿಲ್ಲದೇ ಮುಖ್ಯಮಂತ್ರಿ ಆಗಿದ್ದಾರೆ. ಹೀಗಿದ್ದರೂ ಈ ರೀತಿಯ ಅಸಹಾಯಕತೆ ಮಾತುಗಳನ್ನು ಆಡಿದ್ದು ಯಾಕೆ? ಸಿಎಂ ಆಗಿದ್ರೂ ತಂತಿ ಮೇಲೆ ನಡೆಯುವಂತಾಗಿದೆ ಎಂದು ಹೇಳಿದ್ಯಾಕೆ? ಎನ್ನುವುದನ್ನು ವಿಮರ್ಶೆ ಮಾಡುವುದಾದ್ರೆ ಎದುರಿಗೆ ಹಲವು ಪ್ರಶ್ನೆಗಳು ಕಾಣಿಸುತ್ತವೆ.

ಹೆಸರಿಗಷ್ಟೇ ಯಡಿಯೂರಪ್ಪನವರು ಸಿಎಂ ಆಗಿದ್ದಾರಾ? ಯಡಿಯೂರಪ್ಪಗೆ ಹೈಕಮಾಂಡ್ ಮೂಗುದಾರ ಹಾಕಿದ್ಯಾ? ಯಡಿಯೂರಪ್ಪ ಸ್ವತಂತ್ರವಾಗಿ ನಿರ್ಧಾರಕ್ಕೆ ಬ್ರೇಕ್ ಹಾಕಲಾಗಿದ್ಯಾ? ಅದಕ್ಕಾಗಿಯೇ ಮೂವರನ್ನು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದ್ಯಾ? ಹೀಗೆ ಹತ್ತು ಹಲವು ಪ್ರಶ್ನೆಗಳು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಮೂಡಲಾರಂಭಿಸಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top